ADVERTISEMENT

ಅಂಗವಿಕಲರಿಗೆ ಅವಕಾಶ ನೀಡುವುದು ಅಗತ್ಯ: ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:21 IST
Last Updated 26 ಫೆಬ್ರುವರಿ 2026, 5:21 IST
ಬ್ಯಾಡಗಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಉದ್ಘಾಟಿಸಿದರು 
ಬ್ಯಾಡಗಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಉದ್ಘಾಟಿಸಿದರು    

ಬ್ಯಾಡಗಿ: ಅಂಗವಿಕಲರ ಮೇಲೆ ಅನುಕಂಪ ತೋರಿದರೆ ಸಾಲದು ಅವರಿಗೆ ಎಲ್ಲ ಕ್ಷೇತ್ರಗಳಲ್ಲಿ ಅವಕಾಶ ನೀಡುವುದು ಅಗತ್ಯವಾಗಿದೆ’ ಎಂದು ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಸಾಮಾಜಿಕ ನ್ಯಾಯ ಮತ್ತು ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ನ್ಯಾಯಾಧೀಶ ಸುರೇಶ ವಗ್ಗನವರ, ವಕೀಲರ ಸಂಘದ ಉಪಾಧ್ಯಕ್ಷ ಜಿ.ಬಿ. ಯಲಗಚ್ಚ, ಪ್ರಭು ಶೀಗಿಹಳ್ಳಿ, ರಾಜಣ್ಣ ನ್ಯಾಮತಿ, ಕೆ.ಆರ್. ಲಮಾಣಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೆಹಬೂಬಸಾಬ್ ನದಾಫ್ ಇದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.