ADVERTISEMENT

ಬ್ಯಾಡಗಿ: 350ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 3:56 IST
Last Updated 21 ಡಿಸೆಂಬರ್ 2025, 3:56 IST
ಬ್ಯಾಡಗಿ ಪಟ್ಟಣದಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ವಾಹನದ ಮೂಲಕ ಸಾಗಿಸಲಾಯಿತು
ಬ್ಯಾಡಗಿ ಪಟ್ಟಣದಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ವಾಹನದ ಮೂಲಕ ಸಾಗಿಸಲಾಯಿತು   

ಬ್ಯಾಡಗಿ: ಪಟ್ಟಣದಲ್ಲಿದ್ದ ಬೀದಿ ನಾಯಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ 245 ಗಂಡು ನಾಯಿ ಹಾಗೂ 105 ಹೆಣ್ನು ನಾಯಿಗಳು ಸೇರಿದಂತೆ ಒಟ್ಟಾರೆ 350ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ತಿಳಿಸಿದರು.

ಶನಿವಾರ ‘ಪ್ರಜಾವಾಣಿ‘ಯೊಂದಿಗೆ ಮಾತನಾಡಿದ ಅವರು, ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆಗೆ ಒಳಪಡಿಸಲು ₹4.50 ಲಕ್ಷ ವೆಚ್ಚದ ಅನುದಾನದಲ್ಲಿ ಒಳಚರಂಡಿ ನೀರು ಸಂಸ್ಕರಣಾ ಘಟಕದ ಬಳಿ ವಿಶೇಷ ಶೆಡ್‌ ನಿರ್ಮಿಸಿ ಅದರಲ್ಲಿ ನಾಯಿಗಳನ್ನು ಹಿಡಿದು ತಂದು ಚಿಕಿತ್ಸೆಗೆ ಒಳಪಡಿಸಲಾಗಿದೆ. ಮೂರು ದಿನದ ಆರೈಕೆಯ ಬಳಿಕ ಮತ್ತೆ ಅವುಗಳನ್ನು ಮೂಲ ಸ್ಥಳಕ್ಕೆ ಬಿಡಲಾಗುವುದು ಎಂದರು.

ಪಶುಸಂಗೋಪನಾ ಇಲಾಖೆಯ ವೈದ್ಯರ ಸಹಕಾರದಿಂದ 50 ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಗೊಳಿಸಲಾಯಿತು. ಬಳಿಕ ಮಹಾರಾಷ್ಟ್ರದ ನಾಸಿಕ್‌ನ ಅನಿಮಲ್‌ ವೆಲ್‌ಫೇರ್‌ ಅಂಡ್‌ ಎಂಟಿ ಹರಾಷಮೆಂಟ್‌ ಎಂಬ ಎನ್‌ಜಿಒ ಸಂಸ್ಥೆಯ ಪರಿಣಿತ ಪಶು ವೈದ್ಯ ಗೌರವ ಕ್ಷತ್ರಿಯ ನೇತೃತ್ವದ ತಂಡ 204 ಗಂಡು ನಾಯಿ ಮತ್ತು 96 ಹೆಣ್ಣು ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆ ಪೂರ್ಣಗೊಳಿಸಿದೆ ಎಂದು ಅವರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.