ಬ್ಯಾಡಗಿ: ಪಟ್ಟಣದ ಸುಭಾಷ ನಗರದಲ್ಲಿ ತೆರೆಯಲಾದ ‘ನಮ್ಮ ಕ್ಲಿನಿಕ್’ನ್ನು ಭಾನುವಾರ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಕ್ಲಿನಿಕ್ ಉದ್ಘಾಟಿಸಿದರು.
ಬಾಡಿಗೆ ಕಟ್ಟಡದಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ತಲಾ ಒಬ್ಬ ವೈದ್ಯರು, ಶುಶ್ರೂಷಕಿ, ಲ್ಯಾಬ್ ಟೆಕ್ನಿಷಿಯನ್ ಕಾರ್ಯನಿರ್ವಹಿಸಲಿದ್ದಾರೆ. ಗರ್ಯಿಣಿಯರ ತಪಾಸಣೆ, ಸಕ್ಕರೆ ಕಾಯಿಲೆ ಮುಂತಾದ ಕಾಯಿಲೆಗಳ ತಪಾಸಣೆ ಉಚಿತವಾಗಿದ್ದು, ಉಚಿತ ಔಷಧವೂ ದೊರೆಯಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ರಾಂತಿ ಭವನ ಉದ್ಘಾಟನೆ: ಲೋಕೋಪಯೋಗಿ ಇಲಾಖೆ ನಿರ್ಮಿಸಿದ ಗಣ್ಯ ವ್ಯಕ್ತಿಗಳ ವಿಶ್ರಾಂತಿ ಭವನ ಕಟ್ಟಡವನ್ನೂ ಸಚಿವ ಶಿವಾನಂದ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ‘ಮುಖ್ಯರಸ್ತೆಯ ಮೂಲಕ ಹಾದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ವಿಸ್ತರಣೆಗೆ ಸಾರ್ವಜನಿಕರ ಒತ್ತಡವಿದೆ. ಆದರೆ, ನ್ಯಾಯಾಲಯದಲ್ಲಿ ಪ್ರಕರಣವಿದೆ. ಆಸ್ತಿ ಮಾಲಿಕರ ಮನವೊಲಿಸುವ ಕಾರ್ಯ ನಡೆದಿದೆ’ ಎಂದರು.
ಶಾಸಕ ಬಸವರಾಜ ಶಿವಣ್ಣನವರ, ತಾಲ್ಲೂಕು ಆರೋಗ್ಯಾಧಿಕಾರಿ ಭಜಂತ್ರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.