ಬ್ಯಾಡಗಿ: ಪಟ್ಟಣದ ಹಂಸಭಾವಿ ರಸ್ತೆಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್‌ಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಿವಿಲ್ ಎಂಜಿನಿಯರಿಂಗ್, ಕ್ಲೌಡ್ ಕಂಪ್ಯೂಟಿಂಗ್, ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಕಮ್ಯೂಮಿಕೇಷನ್ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ತಲಾ 63 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು.
ಸುಜ್ಜಿತ ಕಟ್ಟಡ, ಅಚ್ಚುಕಟ್ಟಾದ ಪ್ರಯೋಗಾಲಯ, ಶಿಷ್ಯವೇತನ ಹಾಗೂ ಇನ್ನಿತರ ಸೌಲಭ್ಯಗಳು, ಪ್ರತಿಷ್ಠಿತ ಕಂಪನಿಗಳಲ್ಲಿ ತರಬೇತಿ ಮತ್ತು ಉದ್ಯೋಗಾವಕಾಶ, ಅತೀ ಕಡಿಮೆ ವೆಚ್ಚದಲ್ಲಿ ವ್ಯಾಸಂಗಕ್ಕೆ ಉತ್ತಮ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊ.8088678218/8277361857 ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಚಂದ್ರಶೇಖರ ಗಂಟಿಸಿದ್ದಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.