
ಬ್ಯಾಡಗಿ ಮೆಣಸಿನಕಾಯಿ
ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶುಕ್ರವಾರ 28,269 ಚೀಲ (7,067ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿದ್ದು, ಆವಕದಲ್ಲಿ ಇಳಿಕೆ ಕಂಡು ಬಂದಿದೆ. ಮೆಣಸಿನಕಾಯಿ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಜ.15 ರಂದು ಮಾರುಕಟ್ಟೆಗೆ ರಜೆ ಘೋಷಣೆಯಾಗಿದ್ದರಿಂದ ಶುಕ್ರವಾರದ ಮಾರುಕಟ್ಟೆಯಲ್ಲಿ ಆವಕದಲ್ಲಿ ಹೆಚ್ಚಳವಾಗಿಲ್ಲ. ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮೆಣಸಿನಕಾಯಿ ಮಾರುಕಟ್ಟೆಗೆ ಬರುವುದು ಅನುಮಾನವಾಗಿದೆ. ಮುಂದಿನ ಸೋಮವಾರ ಆವಕದಲ್ಲಿ ಹೆಚ್ಚಳವಾಗಬಹುದು ಎಂದು ವರ್ತಕರು ನಿರೀಕ್ಷೆ ಹೊಂದಿದ್ದಾರೆ.
ಜ.12 ರಂದು ಮಾರುಕಟ್ಟೆಯಲ್ಲಿ 75,617 ಚೀಲ (18,904 ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿದ್ದವು. ಶುಕ್ರವಾರದ ಮಾರುಕಟ್ಟೆಗೆ ಒಟ್ಟು 3,642 ಲಾಟ್ ಮೆಣಸಿನಕಾಯಿ ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಮತ್ತು ಗುಣಮಟ್ಟದ ಕೊರತೆ ಇರುವ 134 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ. ಬ್ಯಾಡಗಿ ಮೂಲ ತಳಿ (ಲೋಕಲ್) ಮೆಣಸಿನಕಾಯಿಗೆ ಬೇಡಿಕೆ ಹೆಚ್ಚಿದೆ. ಕಾರಣ 4 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹62,786ರಂತೆ, 10 ಚೀಲ ಕಡ್ಡಿ ಮೆಣಸಿನಕಾಯಿ ₹57,399 ರಂತೆ ಹಾಗೂ ಗುಂಟೂರ ತಳಿ ₹16,509 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದ್ದು, ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹40,100, ಬ್ಯಾಡಗಿ ಕಡ್ಡಿ ₹38,009 ಹಾಗೂ ಗುಂಟೂರ ತಳಿ ₹13,509ರಂತೆ ಮಾರಾಟವಾಗಿವೆ.
ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 287 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
ಶುಕ್ರವಾರದ ಮಾರುಕಟ್ಟೆ ದರ (ಪ್ರತಿ ಕ್ವಿಂಟಲ್‌ಗೆ)
ಕನಿಷ್ಠ– ಗರಿಷ್ಠ
ಬ್ಯಾಡಗಿ ಕಡ್ಡಿ: ₹4,359- ₹57,399
ಬ್ಯಾಡಗಿ ಡಬ್ಬಿ: ₹4,689- ₹62,786
ಗುಂಟೂರ ತಳಿ: ₹1,409- ₹16,509
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.