ADVERTISEMENT

ಬ್ಯಾಡಗಿ: ಮೆಣಸಿನಕಾಯಿ ಆವಕದಲ್ಲಿ ತುಸು ಹೆಚ್ಚಳ 

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 4:45 IST
Last Updated 15 ಅಕ್ಟೋಬರ್ 2025, 4:45 IST
<div class="paragraphs"><p>ಬ್ಯಾಡಗಿ ಮೆಣಸಿನಕಾಯಿ</p></div>

ಬ್ಯಾಡಗಿ ಮೆಣಸಿನಕಾಯಿ

   

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಂಗಳವಾರ 25,826 ಚೀಲ (6,456 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟವಾಗಿದ್ದು, ಆವಕದಲ್ಲಿ ತುಸು ಹೆಚ್ಚಳ ಕಂಡು ಬಂದಿದೆ. ಕಳೆದ ಶುಕ್ರವಾರ ಮಾರುಕಟ್ಟೆಯಲ್ಲಿ 22,354 ಚೀಲ (5,588 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟವಾಗಿದ್ದವು.

ದಸರಾ ಹಬ್ಬದ ಬಳಿಕ ಹೊಸ ಮೆಣಸಿನಕಾಯಿ ಅವಕ ಹೆಚ್ಚುತ್ತಿದೆ. ಮಂಗಳವಾರ ಪ್ರಾಂಗಣದಲ್ಲಿ 891 ಲಾಟ್‌ ಮೆಣಸಿನಕಾಯಿ ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಮತ್ತು ಗುಣಮಟ್ಟದ ಕೊರತೆ ಇರುವ 133 ಲಾಟ್‌ಗಳಿಗೆ ವರ್ತಕರು ಟೆಂಡರ್‌ ನಮೂದಿಸಿಲ್ಲ. ಕಾರಣ ರೈತರು ಒಣಗಿಸಿದ ಮೆಣಸಿನಕಾಯಿಯನ್ನು ಮಾರಾಟಕ್ಕೆ ತರಬೇಕೆಂದು ವರ್ತಕರ ಸಂಘ ಮನವಿ ಮಾಡಿಕೊಂಡಿದೆ.

ADVERTISEMENT

75 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹27,200 ರಂತೆ, 61 ಚೀಲ ಕಡ್ಡಿ ಮೆಣಸಿನಕಾಯಿ ₹25,609 ರಂತೆ ಹಾಗೂ ಗುಂಟೂರು ತಳಿ ಮೆಣಸಿನಕಾಯಿ ₹13,800 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ.

ಸರಾಸರಿ ಬೆಲೆಯಲ್ಲಿ ತುಸು ಹೆಚ್ಚಳವಾಗಿದ್ದು, ಬ್ಯಾಡಗಿ ಡಬ್ಬಿ ₹20,509, ಬ್ಯಾಡಗಿ ಕಡ್ಡಿ ₹19,009 ಹಾಗೂ ಗುಂಟೂರ ತಳಿ ₹11,929 ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 98 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.