
ಬ್ಯಾಡಗಿ : ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಯಲ್ಲಿ ಫೆ.26ರಂದು 1,29,855 ಚೀಲ (32,463 ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿದ್ದು, ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
ಕಳೆದ ಫೆ.23ರಂದು ಮಾರುಕಟ್ಟೆಯಲ್ಲಿ ಒಟ್ಟು1,54,942 ಚೀಲ (38,735 ಕ್ವಿಂಟಲ್) ಮಾರಾಟವಾಗಿದ್ದವು. ಗುರುವಾರ ಮಾರುಕಟ್ಟೆಯಲ್ಲಿ ಒಟ್ಟು 15,620 ಲಾಟ್ ಮೆಣಸಿನಕಾಯಿ ಟೆಂಡರ್‌ಗೆ ಇಡಲಾಗಿದ್ದು, ತೇವಾಂಶ ಹೆಚ್ಚಿರುವ ಹಾಗೂ ಕಡಿಮೆ ಗುಣಮಟ್ಟದ 280 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ.
ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹67,109 ರಂತೆ, ಕಡ್ಡಿ ಮೆಣಸಿನಕಾಯಿ ₹63,869ರಂತೆ ಮತ್ತು ಗುಂಟೂರು ತಳಿ ₹18,119ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿಯೂ ಸ್ಥಿರತೆ ಕಾಯ್ದುಕೊಂಡಿದ್ದು, ಬ್ಯಾಡಗಿ ಕಡ್ಡಿ ₹47,859, ಬ್ಯಾಡಗಿ ಡಬ್ಬಿ ₹51,529 ಹಾಗೂ ಗುಂಟೂರ ತಳಿ ₹14,129ರಂತೆ ಮಾರಾಟವಾಗಿವೆ.
ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು408 ಖರೀದಿ ವರ್ತಕರು ಪಾಲ್ಗೊಂಡಿದ್ದರು. ಅವರು ಒಟ್ಟಾರೆ 1.45 ಲಕ್ಷ ಬಾರಿ ದರವನ್ನು ಕೋಟ್ ಮಾಡಿದ್ದಾರೆ ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.