ADVERTISEMENT

‘ಮರಳು ಗಣಿಗಾರಿಕೆ ಪರವಾನಗಿ ರದ್ದುಪಡಿಸಿ’-ರವೀಂದ್ರಗೌಡ ಎಫ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 16:20 IST
Last Updated 13 ಆಗಸ್ಟ್ 2021, 16:20 IST
ರಾಣೆಬೆನ್ನೂರು ತಾಲ್ಲೂಕಿನ ಹರನಗಿರಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮರಳು ಗಣಿಗಾರಿಕೆಗೆ ನೀಡಲು ಉದ್ದೇಶಿಸಿರುವ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿದರು
ರಾಣೆಬೆನ್ನೂರು ತಾಲ್ಲೂಕಿನ ಹರನಗಿರಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮರಳು ಗಣಿಗಾರಿಕೆಗೆ ನೀಡಲು ಉದ್ದೇಶಿಸಿರುವ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿದರು   

ಹಾವೇರಿ: ‘ರಾಣೆಬೆನ್ನೂರು ತಾಲ್ಲೂಕಿನ ಹರನಗಿರಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮರಳು ಗಣಿಗಾರಿಕೆಗೆ ನೀಡಲು ಉದ್ದೇಶಿಸಿರುವ ಪರವಾನಗಿಯನ್ನು ಪರಿಸರದ ಹಿತದೃಷ್ಟಿಯಿಂದ ತೆಡೆಹಿಡಿಯಬೇಕು. ಇಲ್ಲದಿದ್ದರೆ ಸಾರ್ವಜನಿಕರು, ಪರಿಸರ ಪ್ರೇಮಿಗಳು, ಕನ್ನಡಪರ ಹಾಗೂ ರೈತಪರ ಸಂಘಟನೆಗಳಿಂದ ಹೋರಾಟ ಮಾಡಲಾಗುವುದು' ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಎಫ್. ಪಾಟೀಲ ಎಚ್ಚರಿಸಿದರು.

ಅಧಿಕಾರಿಗಳು ಮರಳು ದಂಧೆ ಮಾಡುವವರ ಜತೆ ಶಾಮೀಲಾಗಿ ಮರಳು ಗಣಿಗಾರಿಕೆ ನಡೆಸಲು ಅವಕಾಶ ನೀಡಲು ಹೊರಟಿದ್ದಾರೆ. ಉದ್ದೇಶಿತ ಸ್ಥಳದಲ್ಲಿ ಮರಳು ಗಣಿಗಾರಿಕೆ ಮಾಡುವುದರಿಂದ ರಸ್ತೆಗಳು ಹಾಳಾಗುತ್ತವೆ, ಪರಿಸರ ನಾಶವಾಗುತ್ತವೆ. ಲಾರಿ, ಟಿಪ್ಪರ್‌ಗಳ ಅಧಿಕ ಸಂಚಾರದಿಂದ ಅಪಘಾತಗಳು ಸಂಭವಿಸುತ್ತವೆ. ದೂಳು ಕುಳಿತು ಬೆಳೆ ನಾಶವಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಮರಳು ಗಣಿಗಾರಿಕೆಗೆ ಅನುಮತಿ ನೀಡಬಾರದು. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಹೋರಾಟಗಾರರಾದ ಬಸವರಾಜ ಕೊಂಗಿಯವರ, ಎಸ್.ಡಿ. ಹಿರೇಮಠ, ಡಿಳ್ಳೇಪ್ಪ ಸತ್ಯಪ್ಪನವರ, ರಾಜು ಮಾದಮ್ಮನವರ, ಸುರೇಶಪ್ಪ ಗರಡಿಮನಿ, ಹರಿಹರಗೌಡ ಪಾಟೀಲ, ಎಲ್ಲರೆಡ್ಡಿ ಎರೇಕುಪ್ಪಿ, ಜಮಾಲ್‌ಸಾಬ್ ಸೇತಸಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.