ADVERTISEMENT

ಕಾರುಗಳ ಮುಖಾಮುಖಿ ಡಿಕ್ಕಿ: ನಾಲ್ವರ ಸಾವು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 14:08 IST
Last Updated 29 ಏಪ್ರಿಲ್ 2022, 14:08 IST
ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ ಹತ್ತಿರ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರು ಸಾವಿಗೀಡಾಗಿದ್ದಾರೆ
ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ ಹತ್ತಿರ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರು ಸಾವಿಗೀಡಾಗಿದ್ದಾರೆ   

ರಾಣೆಬೆನ್ನೂರು: ನಗರದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ ಹತ್ತಿರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರು ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಗುಜರಾತ್‌ ಮೂಲದ ಕಾರಿನಲ್ಲಿದ್ದ ಮೂವರು, ಕೇರಳ ಮೂಲದ ಕಾರಿನಲ್ಲಿದ್ದ ಒಬ್ಬರು ಮೃತಪಟ್ಟಿದ್ದು, ಮೃತರ ಹೆಸರು ಪತ್ತೆಯಾಗಿಲ್ಲ.ಮೂವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬ ಗಂಭೀರ ಗಾಯಗೊಂಡು ರಾಣೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಅಪಘಾತ ನಡೆದ ಸ್ಥಳಕ್ಕೆ ನಗರದ ಸಂಚಾರ ಠಾಣೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಖಂಗೊಂಡಿದ್ದ ವಾಹನಗಳನ್ನು ತೆರವುಗೊಳಿಸಿ, ಇತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.