ADVERTISEMENT

ಚಂಪಾ ಹತ್ತಿಮತ್ತೂರಿನ ಕ್ರಾಂತಿಕಾರಿ ಸಾಹಿತಿ: ಬೊಮ್ಮಾಯಿ

ಚಂಪಾ ನಿಧನದಿಂದ ದುಃಖಿತನಾಗಿದ್ದೇನೆ: ಸಿಎಂ

​ಪ್ರಜಾವಾಣಿ ವಾರ್ತೆ
Published 10 ಜನವರಿ 2022, 16:21 IST
Last Updated 10 ಜನವರಿ 2022, 16:21 IST

ಹಾವೇರಿ: ‘ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಅವರು ನಿಧನರಾದ ವಿಷಯದಿಂದ ತುಂಬಾ ದುಃಖಿತನಾಗಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ.

ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಫೇಸ್‌ಬುಕ್‌ ಖಾತೆಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.