
ಪ್ರಜಾವಾಣಿ ವಾರ್ತೆ
ಹಾನಗಲ್: ಅರಣ್ಯ ಇಲಾಖೆಯ ಹಾನಗಲ್ ವಲಯದ ಗಸ್ತು ಅರಣ್ಯ ಪಾಲಕ ಕೃಷ್ಣಾ ನಾಯ್ಕ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಸಿಕ್ಕಿದೆ.
ರಾಜ್ಯದ ಅರಣ್ಯ ಮತ್ತ ವನ್ಯಜೀವಿ ಸಂರಕ್ಷಣೆಯಲ್ಲಿ ಶೌರ್ಯ, ದಿಟ್ಟತನ, ಅರಣ್ಯ ಅಭಿವೃದ್ಧಿ ಮತ್ತು ಅರಣ್ಯ ಸಂರಕ್ಷಣೆ ಕ್ಷೇತ್ರದಲ್ಲಿ ಗಣನೀಯ ಸಾಧನೆಗಾಗಿ ಚಿನ್ನದ ಪದಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿನ್ನದ ಪದಕ ನೀಡಿ ಗೌರವಿಸಿದರು. ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.