ADVERTISEMENT

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ಶೇಖರಗೌಡ ರಾಮತ್ನಾಳ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 5:11 IST
Last Updated 17 ಜನವರಿ 2026, 5:11 IST
ಹಾವೇರಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ರಕ್ಷಣೆ ಕುರಿತ ಅರಿವು ಕಾರ್ಯಕ್ರಮವನ್ನು ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಉದ್ಘಾಟಿಸಿದರು.
ಹಾವೇರಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ರಕ್ಷಣೆ ಕುರಿತ ಅರಿವು ಕಾರ್ಯಕ್ರಮವನ್ನು ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಉದ್ಘಾಟಿಸಿದರು.   

ಹಾವೇರಿ: ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಇಲಾಖೆಗಳ ಜವಾಬ್ದಾರಿ ಅಲ್ಲ. ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ , ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾವೇರಿ ಇವರ ಸಹಯೋಗದಲ್ಲಿ ನಡೆದ ಮಕ್ಕಳ ರಕ್ಷಣೆ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಕ್ಷಣಾ ವಿಷಯದಲ್ಲಿ ಪುನರ್ವಸತಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚಿಸಿ, ಮಕ್ಕಳ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.

ADVERTISEMENT

ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದಕ್ಕಾಗಿಯೇ ನಮ್ಮ ದೇಶವು ವಿಶ್ವ ಸಂಸ್ಥೆಯೊಂದಿಗೆ ಮಕ್ಕಳ ಹಕ್ಕುಗಳ ಒಡಂಬಡಿಕೆ ಮಾಡಿಕೊಂಡಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ಕಾನೂನು ರಚಿಸಿ ಅನುಷ್ಠಾನಗೊಳಿಸಿದೆ. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಶೋಷಣೆ ವಿರುದ್ಧದ ಹಕ್ಕು, ಲೈಂಗಿಕ ಅಪರಾಧಗಳಿಂದ ರಕ್ಷಣೆ ಕಾಯ್ದೆ ಜಾರಿಗೊಳಿಸಿದೆ. ಹಾಗೆಯೇ ವಿಶೇಷ ಚೇತನ ಮಕ್ಕಳ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯತ್ ಹಾಗೂ ಸ್ಥಳಿಯ ಸರ್ಕಾರಗಳ ಅನುದಾನದಲ್ಲಿ ಶೇ.5ರಷ್ಟು ಮೀಸಲಿಟ್ಟು ಕಾರ್ಯಕ್ರಮ ರೂಪಿಸಲು ಅವಕಾಶ ನೀಡಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ವನಿರ್ವಹಣಾಧಿಕಾರಿ ರುಚಿ ಬಿಂದಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ರಕ್ಷಣೆ ಕರ್ತವ್ಯ. ನಾವು ನೀವು ಎನ್ನದೆ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿವೆ ಇದನ್ನು ತಡೆಗಟ್ಟಲು ಪುನರ್ವಸತಿ ಕಾರ್ಯಕರ್ತರು ಮುಂದಾಗಬೇಕು ಮುಂಚಿತವಾಗಿ ಮಾಹಿತಿ ಗೊತ್ತಿದ್ದರೂ, ಕೆಲವರು ಸುಮನ್ನೇ ಇರುತ್ತಿದ್ದಾರೆ. ಚಿಕ್ಕ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಅವರು ಮಾತನಾಡಿ, ಮಕ್ಕಳ ರಕ್ಷಣೆಗೆ ಪೊಲೀಸ್ ಇಲಾಖೆ ಯಾವಾಗಲು ಬದ್ದವಾಗಿದೆ ಅದಕ್ಕೆ ನಿಮ್ಮೆಲ್ಲರ ಸಹಕಾರ ತುಂಬಾ ಅವಶ್ಯಕತೆಯಿದೆ. ಪುನರ್ವಸತಿ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಕುರಿತು ಮಾಹಿತಿಯನ್ನು ಸಕಾಲದಲ್ಲಿ ನೀಡಿ. ಇದರಿಂದ ಮಕ್ಕಳನ್ನು ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿಯಾಗಿದೆ ಹಾಗೆಯೇ ಮಕ್ಕಳಿಗೆ ಅವರ ಸೌಲಭ್ಯಗಳು ಮತ್ತು ರಕ್ಷಣೆ ಕುರಿತು ಅರಿವು ಮೂಡಿಸಿ ಮಕ್ಕಳ ರಕ್ಷಣೆಗಾಗಿ ಪೊಲೀಸ್ ಇಲಾಖೆಯ ಸಹಾಯವಾಣಿ 1098 ಹಾಗೂ 112ಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು.

ಯುನಿಸೆಫ್‌ ಯೋಜನಾ ವ್ಯವಸ್ಥಾಪಕ ಹರೀಶ್ ಜೋಗಿ ಇವರು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರೇವತಿ ಎಸ್. ಹೊಸಮಠ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಗೀತಾ ಪಾಟೀಲ, ಜಿಲ್ಲಾ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಆಶು ನದಾಫ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಪುನರವಸತಿ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.