ಬಂಧನ
(ಪ್ರಾತಿನಿಧಿಕ ಚಿತ್ರ)
ಹಾವೇರಿ: ಜಿಲ್ಲೆಯ ಹಂಸಬಾವಿ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಆರೋಪಿ ಅರುಣಕುಮಾರ ಎಂಬಾತನನ್ನು ಬಂಧಿಸಲಾಗಿದೆ.
‘ಇತ್ತೀಚೆಗೆ ನಡೆದಿದ್ದ ಕೃತ್ಯದ ಸಂಬಂಧ ಬಾಲಕಿ ಪೋಷಕರು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದರನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.
‘ಬಾಲಕಿಯು ಪೋಷಕರ ಜೊತೆ ವಾಸವಿದ್ದರು. ಅವರ ಪಕ್ಕದ ಮನೆಯಲ್ಲಿಯೇ ಆರೋಪಿ ನೆಲೆಸಿದ್ದ. ಆಟವಾಡುತ್ತಿದ್ದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದಿದ್ದ ಆರೋಪಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ಗಾಬರಿಗೊಂಡಿದ್ದ ಬಾಲಕಿ, ಚೀರಾಡಿದ್ದಳು. ಧ್ವನಿ ಕೇಳಿ ಬಾಲಕಿಯ ತಾಯಿ ಸ್ಥಳಕ್ಕೆ ಹೋಗಿದ್ದರು. ಮಗಳನ್ನು ಮನೆಗೆ ಕರೆದೊಯ್ದಿದ್ದರು. ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರ ಬಳಿ ಕರೆದೊಯ್ದಾಗ ದೌರ್ಜನ್ಯ ಸಂಗತಿ ಗೊತ್ತಾಗಿತ್ತು. ಬಳಿಕವೇ ಠಾಣೆಗೆ ದೂರು ನೀಡಿದ್ದರು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.