ADVERTISEMENT

ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಹೆಚ್ಚಳ

ಮೆಣಸಿನಕಾಯಿ ಆವಕದಲ್ಲಿ ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 15:24 IST
Last Updated 14 ಸೆಪ್ಟೆಂಬರ್ 2024, 15:24 IST

ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ ಶುಕ್ರವಾರ 15,095 ಚೀಲ (3,773 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಏರಿಕೆಯಾಗಿದೆ.

ಡಬ್ಬಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಇಳಿಕೆಯಾಗಿದ್ದು, ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ತುಸು ಏರಿಕೆ ಕಂಡಿದೆ. ಮಂಗಳವಾರ ಮತ್ತು ಶುಕ್ರವಾರ ವಹಿವಾಟು ಜೋರಾಗಿದ್ದು, ಕೋಲ್ಡ್ ಸ್ಟೋರೇಜ್‌ಗಳಲ್ಲಿ ಸಂಗ್ರಹವಿರುವ ಮೆಣಸಿನಕಾಯಿ ಮಾರಾಟ ಮಾತ್ರ ನಡೆಯುತ್ತಿದೆ. ಕಳೆದ ಮಂಗಳವಾರ 11,097 ಚೀಲ (2,774 ಕ್ವಿಂಟಲ್‌) ಆವಕವಾಗಿತ್ತು.

ಶುಕ್ರವಾರ 521 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 56 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 110 ಚೀಲ ಡಬ್ಬಿ ಮೆಣಸಿನಕಾಯಿ ₹ 30,500, 31 ಚೀಲ ಕಡ್ಡಿ ಮೆಣಸಿನಕಾಯಿ ₹ 28,000 ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹ 16,859 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿವೆ.

ADVERTISEMENT

ಡಬ್ಬಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ₹ 6 ಸಾವಿರ ಇಳಿಕೆಯಾಗಿದ್ದರೆ, ಕಡ್ಡಿ ಮೆಣಸಿನಕಾಯಿ ₹ 2 ಸಾವಿರ ಏರಿಕೆ ಕಂಡಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹ 25,009, ಬ್ಯಾಡಗಿ ಕಡ್ಡಿ ₹ 23,509 ಹಾಗೂ ಗುಂಟೂರ ತಳಿ ₹ 13,009 ರಂತೆ ಮಾರಾಟವಾಗಿವೆ ತುಸು ಹೆಚ್ಚಳವಾಗಿದೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ 93 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.