ADVERTISEMENT

ಚೀನಾ ವಿರುದ್ಧ ಬಿಜೆಪಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 12:30 IST
Last Updated 18 ಜೂನ್ 2020, 12:30 IST
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಚೀನಾ ಉತ್ಪಾದಿತ ವಸ್ತುಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು 
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಚೀನಾ ಉತ್ಪಾದಿತ ವಸ್ತುಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು    

ಹಾವೇರಿ:ಲಡಾಖ್‌ ಗಡಿಯಲ್ಲಿ ಸೋಮವಾರ ರಾತ್ರಿ ಚೀನಾ ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಮೈತ್ರಿ ಮಂತ್ರ ಜಪಿಸುತ್ತಲೇ ಭಾರತದ ಬೆನ್ನಿಗೆ ಇರಿಯುವ ಕೆಲಸವನ್ನು ಮಾಡುತ್ತಿರುವ ಚೀನಾ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಕೈಗೊಂಡ ಪ್ರತಿಭಟನೆ ವೇಳೆ, ಚೀನಾ ಉತ್ಪಾದಿತ ವಸ್ತುಗಳನ್ನು ಸುಡುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರು ಕೂಡಾ ಚೀನಾ ವಸ್ತುಗಳನ್ನು ಬಳಸದೆ, ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ‘ಭಾರತದ ಶಾಂತ ಸ್ವಭಾವವನ್ನು ಚೀನಾ ದುರುಪಯೋಗ ಪಡಿಸಿಕೊಂಡರೆ ಸುಮ್ಮನಿರಲು ಭಾರತ ನೆಹರೂ ನಾಯಕತ್ವದ ಸರ್ಕಾರವನ್ನು ಹೊಂದಿಲ್ಲ. ಬದಲಾಗಿ ತಲೆಗೆ ತಲೆಗಳ ಪ್ರತ್ಯುತ್ತರ ನೀಡುವ ಧೀಮಂತ ನಾಯಕ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಸುರಕ್ಷಿತವಾಗಿರಲಿದೆ ಎಂದು ಹೇಳಿದರು.

ADVERTISEMENT

ಮುಖಂಡರಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಗಿರೀಶ ತುಪ್ಪದ, ಶಿವಕುಮಾರ ಸಂಗೂರ, ವಿರುಪಾಕ್ಷಪ್ಪ ಕಡ್ಲಿ, ಚನ್ನಮ್ಮ ಬ್ಯಾಡಗಿ, ಕವಿತಾ ಯಲವಗಿಮಠ, ರತ್ನಾ ಭಿಮಕ್ಕನವರ, ಶಿವಯೋಗಿ ಹುಲಿಕಂತಿಮಠ, ಬಬುಸಾಬ್ ಮೋಮಿನಗಾರ, ಪ್ರಭು ಹಿಟ್ನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.