ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ.28ರಂದು ಹಾವೇರಿ, ರಾಣೆಬೆನ್ನೂರು ಹಾಗೂ ಹಿರೇಕೆರೂರಿಗೆ ಆಗಮಿಸಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಜಿಲ್ಲೆಯ 109 ಗ್ರಾಮ ಪಂಚಾಯಿತಿಗಳಿಗೆ ಘನತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಲಿದ್ದಾರೆ.
ಹಾವೇರಿ ತಾಲ್ಲೂಕು:ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಜಿಲ್ಲೆಯ 109 ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯ ವಿಲೇವಾರಿಗಾಗಿ ಖರೀದಿಸಲಾದ ನಾಲ್ಕು ಚಕ್ರಗಳ 109 ಆಟೊ ಟಿಪ್ಪರ್‌ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ, ಹಾವೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 10 ಹಾಸಿಗೆಗಳ ಹಿರಿಯ ನಾಗರಿಕರ ಆರೈಕೆ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ, ಲಾಲ್‌ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯ ವಾಣಿಜ್ಯ ಮಳಿಗೆಗಳ ಉದ್ಘಾಟನೆ, ಹೈಟೆಕ್ ರಂಗಮಂದಿರ ಉದ್ಘಾಟನೆ, ನಗರದ ನಿರಾಶ್ರಿತರಿಗೆ ವಸತಿ ಕೇಂದ್ರ ಕಟ್ಟಡದ ಉದ್ಘಾಟನೆ, ಬಾಲಭವನ ಕಟ್ಟಡದ ಉದ್ಘಾಟನೆ, ಮಂಜುನಾಥ ನಗರದಲ್ಲಿ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ.
ಹಿರೇಕೆರೂರು ತಾಲ್ಲೂಕು:ಹಿರೇಕೆರೂರು ಪಟ್ಟಣದ ದುರ್ಗಾದೇವಿ ಕೆರೆ, ಗುಂಡಗಟ್ಟಿ ಗ್ರಾಮದ ಕೊಪ್ಪದ ಕೆರೆ, ದೂದಿಹಳ್ಳಿ ಗ್ರಾಮದ ಒಟ್ಟಾರೆ ಎಂಟು ಕೆರೆ ತುಂಬಿಸುವ ಬಹುಗ್ರಾಮ ಕೆರೆ ತುಂಬಿಸುವ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ, ಹಿರೇಕೆರೂರು-ರಟ್ಟಿಹಳ್ಳಿ ತಾಲ್ಲೂಕು ಗುಡ್ಡದ ಮಾದಾಪೂರ ಸೇರಿದಂತೆ 13 ಕೆರೆಗಳ ತುಂಬಿಸುವ ಏತ ನೀರಾವರಿ ಯೋಜನೆ, ಹಿರೇಕೆರೂರು ಪಟ್ಟಣದಲ್ಲಿ ಹಿರಿಯ ತೋಟಗಾರಿಕೆ ನಿರ್ದೇಶಕ ನೂತನ ಕಟ್ಟಡ ಉದ್ಘಾಟನೆ, ಪಶು ಆಸ್ಪತ್ರೆ ಕಟ್ಟಡ ಹಾಗೂ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ರಟ್ಟೀಹಳ್ಳಿ ತಾಲ್ಲೂಕು:ರಟ್ಟಿಹಳ್ಳಿಯಲ್ಲಿ ಸರ್ಕಾರಿ ಪದವಿ ಕಾಲೇಜು ಕಟ್ಟಡದ ಹೊಸ ಕೊಠಡಿಗಳ ಉದ್ಘಾಟನೆ, ರಟ್ಟಿಹಳ್ಳಿ, ಮಳಗಿ, ಕಣವಿಸಿದ್ದಗೇರಿ ರಸ್ತೆ ಹಾಗೂ ಕುಮದ್ವತಿ ನದಿಗೆ ನಿರ್ಮಿಸಿರುವ ಸೇತುವೆಗೆ ಅಪ್ರೋಚ್ ರಸ್ತೆಯ ಕಾಮಗಾರಿಗಳ ಉದ್ಘಾಟನೆ, ಹಿರೇಕೆರೂರು ಪಟ್ಟಣದಲ್ಲಿ ದುರ್ಗಾದೇವಿ ತರಕಾರಿ ಮಾರುಕಟ್ಟೆ ಉದ್ಘಾಟನೆ, ರಟ್ಟಿಹಳ್ಳಿ ತಾಲ್ಲೂಕು ಕೇಂದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಮಹರ್ಷಿ ವಾಲ್ಮೀಕಿ ಭವನ ಮತ್ತು ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ ಹಾಗೂ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರಾಣೆಬೆನ್ನೂರು ತಾಲ್ಲೂಕು:ಕುಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ, ರಾಣೆಬೆನ್ನೂರು ನಗರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿಗಳ ಉದ್ಘಾಟನೆ, ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ ಉದ್ಘಾಟನೆ ಹಾಗೂ ಮೂಲಸೌಕರ್ಯಗಳಡಿ ಹೆಚ್ಚುವರಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ರೈತ ಸಂಪರ್ಕ ಕೇಂದ್ರದ ಉದ್ಘಾಟನೆ, ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದ ಉದ್ಘಾಟನೆ, ನಗರಸಭೆ ₹5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಾಜಕ ರಸ್ತೆ, ಚರಂಡಿ ನಿರ್ಮಾಣ, ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಮುಖ್ಯ ಮಾರುಕಟ್ಟೆ, ಸಮುದಾಯ ಭವನಗಳ ಉದ್ಘಾಟನೆ, ಜಲಜೀವನ ಮಿಷನ್ ಯೋಜನೆಯಡಿ ಕರೂರ, ಚಳಗೇರಿ, ಅರೆಮಲ್ಲಾಪೂರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿ ಉದ್ಘಾಟನೆ, ರಾಣೆಬೆನ್ನೂರು ದೊಡ್ಡಕೆರೆ ಹಾಗೂ ಕಮದೋಡ, ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯ ಉದ್ಘಾಟನೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.