ADVERTISEMENT

‘ಗ್ರಾಮ ಒನ್‌’ ಯೋಜನೆಗೆ ಸಿಎಂ ಚಾಲನೆ ಇಂದು

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 13:14 IST
Last Updated 25 ಜನವರಿ 2022, 13:14 IST
ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ 
ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ    

ಹಾವೇರಿ: ಶಿಗ್ಗಾವಿ ತಾಲ್ಲೂಕು ಎನ್.ಎಂ.ತಡಸ ಗ್ರಾಮ ಪಂಚಾಯಿತಿಯಲ್ಲಿನ ‘ಗ್ರಾಮ ಒನ್ ಸೇವಾ ಕೇಂದ್ರ’ವನ್ನು ಜ.26ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರ್ಚುಯಲ್ ವೇದಿಕೆ ಮೂಲಕ ಉದ್ಘಾಟನೆ ನೆರವೇರಿಸಲಿದ್ದಾರೆ.

ರಾಜ್ಯದ 12 ಜಿಲ್ಲೆಗಳ ಸುಮಾರು 3000 ಗ್ರಾಮ ಒನ್ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ. ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಸ್ವಂತ ಗ್ರಾಮದಲ್ಲಿ ತಲುಪಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಒಂದು ‘ಗ್ರಾಮ ಒನ್’ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.

ಈ ಯೋಜನೆಯ ಮುಖಾಂತರ ನಾಗರಿಕರ ಮನೆಯ ಬಳಿಯೇ ಸೇವಾ ಸಿಂಧು ವೇದಿಕೆಯ ಮೂಲಕ 100ಕ್ಕೂ ಅಧಿಕ ಸೇವೆಗಳು ಲಭ್ಯವಾಗುವುದರಿಂದ ಗ್ರಾಮೀಣ ಜನತೆಗೆ ಪ್ರಯಾಣ ಮತ್ತು ಇತರೆ ವೆಚ್ಚದಲ್ಲಿ ಉಳಿತಾಯವಾಗುವುದರ ಜೊತೆಗೆ ಮಧ್ಯವರ್ತಿಗಳ ಹಾವಳಿ ಸಹ ಇರುವುದಿಲ್ಲ. ಸಕಾಲದಲ್ಲಿ ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಗ್ರಾಮ ಒನ್ ಯೋಜನೆಯನ್ನು ‘ಸಕಾಲ’ ತಂತ್ರಾಂಶದೊಂದಿಗೆ ಏಕೀಕರಣ ಮಾಡಲ್ಪಟ್ಟಿರುವುದು ಈ ಯೋಜನೆಯು ಹಲವು ವಿಶಿಷ್ಟಗಳಲ್ಲಿ ಒಂದಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.