ADVERTISEMENT

ಹಾನಗಲ್: ರಾಜೀವ್‌ ಗಾಂಧಿ ಸಾಧನೆ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 21 ಮೇ 2025, 14:29 IST
Last Updated 21 ಮೇ 2025, 14:29 IST
ಹಾನಗಲ್‌ನಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖಂಡರು ಪಾಲ್ಗೊಂಡಿದ್ದರು
ಹಾನಗಲ್‌ನಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖಂಡರು ಪಾಲ್ಗೊಂಡಿದ್ದರು   

ಹಾನಗಲ್: ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಬುಧವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು.

ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ ಮಾತನಾಡಿ, ‘ನವ ಭಾರತ ನಿರ್ಮಾಣಕ್ಕೆ ರಾಜೀವ್ ಗಾಂಧಿ ಅಡಿಪಾಯ ಹಾಕಿದರು. ಆರೋಗ್ಯ, ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ತಂತ್ರಜ್ಞಾನ, ಅಧಿಕಾರ ವಿಕೇಂದ್ರೀಕರಣ ಮೊದಲಾದ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ ತಂದರು. 18 ವರ್ಷ ತುಂಬಿದವರಿಗೆ ಮತ ಚಲಾಯಿಸುವ ಹಕ್ಕು ದೊರಕಿಸಿಕೊಟ್ಟರು’  ಎಂದರು.

ಮುಖಂಡರಾದ ಖುರ್ಷಿದ್ಅಹ್ಮದ್ ಹುಲ್ಲತ್ತಿ, ಮಂಜಣ್ಣ ನೀಲಗುಂದ, ಗುರುರಾಜ್ ನಿಂಗೋಜಿ, ಸಂತೋಷ ಸುಣಗಾರ, ಮೇಕಾಜಿ ಕಲಾಲ, ಸಂತೋಷ ದುಂಡಣ್ಣನವರ, ಸುರೇಶ ನಾಗಣ್ಣನವರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.