ADVERTISEMENT

ಕಮಿಷನ್‌ ದಂಧೆ: ಪ್ರಧಾನಿ ಏಕೆ ಕ್ರಮ ಕೈಗೊಂಡಿಲ್ಲ: ಸಲೀಂ ಅಹಮದ್‌ ಪ್ರಶ್ನೆ

ವಿಧಾನ ಪರಿಷತ್‌ ಚುನಾವಣೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 3:57 IST
Last Updated 28 ನವೆಂಬರ್ 2021, 3:57 IST
ಸಲೀಂ ಅಹಮದ್
ಸಲೀಂ ಅಹಮದ್   

ಹಾವೇರಿ: ರಾಜ್ಯದಲ್ಲಿ ಶೇ 40ರಷ್ಟು ಕಮಿಷನ್‌ ದಂಧೆ ನಡೆಯುತ್ತಿದೆ ಎಂದು ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿರುವ ಉದಾಹರಣೆ ಇತಿಹಾಸದಲ್ಲಿ ಇದೇ ಮೊದಲು. 56 ಇಂಚಿನ ಎದೆ ಇರುವ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಧಾರವಾಡ ಕ್ಷೇತ್ರದ (ಗದಗ, ಹಾವೇರಿ) ವಿಧಾನಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹಮದ್‌ ಪ್ರಶ್ನಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕಮಿಷನ್‌ ದಂಧೆ ಇಷ್ಟು ವ್ಯಾಪಕವಾಗಿ ನಡೆಯುತ್ತಿರುವುದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ. ಪತ್ರ ಬಂದ ಕೂಡಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಪ್ರಧಾನಿಯವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನಿಖೆಗೆ ಆದೇಶ ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಕಾಂಗ್ರೆಸ್‌ನವರು ಕೂಡಾ ಕಮಿಷನ್‌ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ. ಇದ್ದರೆ ದಾಖಲೆ ಬಿಡುಗಡೆ ಮಾಡಲಿ. ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ. ಸುಳ್ಳು ಹೇಳಿಕೆಗಳ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡಬಾರದು ಎಂದರು.

ADVERTISEMENT

ಕಾಂಗ್ರೆಸ್ ಆಡಳಿತದಲ್ಲಿ ಇಂತಹದ್ದುನ್ನು ಮರೆಮಾಚಿಲ್ಲ. ನಡೆದಿದ್ದರೇ ಮಾಹಿತಿ ಪಡೆದುಕೊಳ್ಳಲಿ.ಐದು ವರ್ಷ ಜನರಿಗೆ ಉತ್ತಮ ಆಡಳಿತ ನೀಡಿದ್ದೇವೆ. ಪ್ರಣಾಳಿಕೆಯಲ್ಲಿದ್ದ 170 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.