ADVERTISEMENT

ಅರ್ಧಕ್ಕೆ ನಿಂತ ಸಮುದಾಯ ಭವನ ಕಾಮಗಾರಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2024, 14:34 IST
Last Updated 13 ಡಿಸೆಂಬರ್ 2024, 14:34 IST
ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ಮಹದೇವ ಮೈಲಾರ ಸಮುದಾಯ ಭವನ ನಿರ್ಮಾಣ ಕಾಮಗಾರಿ ಕುರಿತು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಪರಿಶೀಲನೆ ನಡೆಸಿದರು
ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ಮಹದೇವ ಮೈಲಾರ ಸಮುದಾಯ ಭವನ ನಿರ್ಮಾಣ ಕಾಮಗಾರಿ ಕುರಿತು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಪರಿಶೀಲನೆ ನಡೆಸಿದರು   

ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಹುತಾತ್ಮ ಮೈಲಾರ ಸಮುದಾಯ ಭವನ ಕಾಮಗಾರಿ ಸ್ಥಗಿತಗೊಂಡ ಕಾರಣ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಎರಡು ವರ್ಷಗಳ ಹಿಂದೆ ಸಮುದಾಯ ಭವನಕ್ಕೆ ₹ 50 ಲಕ್ಷ ಮಂಜೂರಾಗಿದ್ದು, ಗುತ್ತಿಗೆದಾರನಿಗೆ ಕೇವಲ ₹ 12 ಲಕ್ಷ ಮಾತ್ರ ಬಿಡುಗಡೆ ಮಾಡಲಾಗಿದೆ. ಪರಿಣಾಮ ಕಟ್ಟಡ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ ನೀಡುವಂತೆ ಉದ್ಯಮಿ ವಿಜಯಭರತ ಬಳ್ಳಾರಿ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ಕಟ್ಟಡದ ಅನುದಾನ ಮತ್ತು ಕಾಮಗಾರಿಯ ಪ್ರಗತಿ ಕುರಿತು ನಿರ್ಮಿತಿ ಕೇಂದ್ರದ ಎಂಜಿನಿಯರ್‌ ಅವರಿಂದ ಮಾಹಿತಿ ಪಡೆದರು. ಕೂಡಲೇ ಪಕ್ಕದ ಖಾಲಿ ಜಾಗೆವನ್ನು ಸ್ವಚ್ಛಗೊಳಿಸಿ, ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.