ಹಾವೇರಿ: ನಗರದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಸಾಂತ್ವನ ಹೇಳಿ, ₹50 ಸಾವಿರ ನೆರವಿನ ಚೆಕ್ ನೀಡಿದರು.
ಮಹಿಳಾ ಸಾಂತ್ವನ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿದೆ. ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳನ್ನು ಶೀಘ್ರ ಬಂಧಿಸುತ್ತಾರೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿಸ್ಥರು ಯಾರೇ ಆಗಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.