ಬ್ಯಾಡಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬಡ ಮಕ್ಕಳೂ ಸಹ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಮೂಲಕ ಉತ್ತಮ ಶೈಕ್ಷಣಿಕ ಪ್ರಗತಿ ಸಾಧಿಕಸಲು ಮುಂದಾಗಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ನೋಂದಾಯಿತ ಅರ್ಹ ಕಟ್ಟಡ ಕಾರ್ಮಿಕರ 19 ಮಕ್ಕಳಿಗೆ ಉಚಿತ ಲ್ಯಾಪ್ ಟಾಫ್ ವಿತರಿಸಿ ಅವರು ಮಾತನಾಡಿದರು.ಈ ಹಿಂದೆ ಟ್ಯಾಬ್ ನೀಡಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲು ಈ ಯೋಜನೆಯನ್ನು ಜಾರಿಗೆ ತಂದದೆ ಎಂದರು.
ತಹಶೀಲ್ದಾರ ಫಿರೋಜ್‌ಷಾ ಸೋಮನಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿಯೇ ಕಂಪ್ಯೂಟರ್ ಶಿಕ್ಷಣ ಪಡೆಯಬೇಕಾಗಿದ್ದು, ತಾಂತ್ರಿಕತೆ ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳವಂತೆ ಹೇಳಿದರು.
ತಾಲ್ಲೂಕು ಪಂಚಾಯ್ತಿ ಇಒ ಕೆ.ಎಂ.ಮಲ್ಲಿಕಾರ್ಜುನ, ನಗರ ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೇಶಿಮಿ, ಮುಖಂಡರಾದ ಬೀರಪ್ಪ ಬಣಕಾರ, ಡಿ.ಎಚ್.ಬುಡ್ಡನಗೌಡ್ರ, ರಾಮಣ್ಣ ಉಕ್ಕುಂದ, ದುರ್ಗೇಶ ಗೋಣೆಮ್ಮನವರ, ಕಾರ್ಮಿಕ ನಿರೀಕ್ಷಣಾಧಿಕಾರಿ ಮೀನಾಕ್ಷಿ ಸಿಂದಿಹಟ್ಟಿ ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.