ADVERTISEMENT

ವಿದ್ಯುತ್‌ ದರ ಏರಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 12:33 IST
Last Updated 11 ಜೂನ್ 2021, 12:33 IST
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು   

ಹಾವೇರಿ: ರಾಜ್ಯ ಸರ್ಕಾರ ವಿದ್ಯುತ್ ಏರಿಕೆ ಮಾಡಿರುವುದನ್ನು ಖಂಡಿಸಿ,ಸಮತಾ ಸೈನಿಕ ದಳ ಅಠವಳೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಸಾಂಕೇತಿಕ ಧರಣಿ ನಡೆಸಲಾಯಿತು.

ಬೆಳಗಾವಿ ವಿಭಾಗೀಯ ಸಮಿತಿ ಅಧ್ಯಕ್ಷ ಎನ್.ಎನ್. ಗಾಳೆಮ್ಮನವರ ಮಾತನಾಡಿ, ‘ಈಗಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ಯಾವುದೇ ಕಾನೂನು ರೂಪಿಸಿಲ್ಲ. ಕಳಪೆ ಬಿತ್ತನೆ ಬೀಜಗಳ ಹಾವಳಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲ ಸತೀಶ ಕಾಟೇನಹಳ್ಳಿ, ಸುಶೀಲಾ ಕೋಮನಾಳ, ಮೆಹರ ನಿಗಾರ್, ಭಾಗ್ಯಮ್ಮ ಮಂಜೂಳಕರ, ಯಲ್ಲವ್ವ ಬಂಡಿವಡ್ಡರ, ಲಕ್ಷಮ್ಮ ಕೊರಿಪು, ಬಸಯ್ಯ ಹಿರೇಮಠ, ವನಜಾಕ್ಷಿ ಹಳೂರ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.