ADVERTISEMENT

ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ಕೇಂದ್ರದ ರೈತ ವಿರೋಧಿ ನೀತಿ ಖಂಡನೀಯ: ತಹಸೀಲ್ದಾರ್‌

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 1:43 IST
Last Updated 19 ಜನವರಿ 2021, 1:43 IST
ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಹಾನಗಲ್‌ನಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು
ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಹಾನಗಲ್‌ನಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು   

ಹಾನಗಲ್: ‘ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ನೂತನ ಕೃಷಿ ಕಾಯ್ದೆಗಳು ದೇಶದ ಕೃಷಿಕರಿಗೆ ಮರಣ ಶಾಸನವಾಗಿ ಪರಿಣಮಿಸಿವೆ. ಎಪಿಎಂಸಿ ಮೂಲೆಗುಂಪು ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿರುವುದು ಖಂಡನೀಯ’ ಎಂದು ಮಾಜಿ ಸಚಿವ ಮನೋಹರ ತಹಸೀಲ್ದಾರ್‌ ಹೇಳಿದರು.

ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ನಡೆಸಿದ ಒಂದು ದಿನದ ಉಪವಾಸ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದರು.

ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ರಾಘವೇಂದ್ರ ತಹಸೀಲ್ದಾರ್, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಶಂಕ್ರಣ್ಣ ಪ್ಯಾಟಿ, ರಾಮಣ್ಣ ಶೇಷಗಿರಿ, ಪುರಸಭೆ ಸದಸ್ಯ ನಾಗಪ್ಪ ಸವದತ್ತಿ, ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿಯಾಜ್ ಶೇಖ್, ಮುಖಂಡರಾದ ಸಿ.ಎಸ್. ಬಡಿಗೇರ, ಪುಟ್ಟಪ್ಪ ವಾಸನದ, ನಜೀರ್ ಗಿರಿಸಿನಕೊಪ್ಪ, ಚನ್ನಬಸನಗೌಡ ಪಾಟೀಲ, ಮಖಬೂಲ್‌ಅಹ್ಮದ್ ಸರ್ವಿಕೇರಿ, ಗುಡ್ಡಪ್ಪ ಸುಂಕದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.