ADVERTISEMENT

ಕಾಂಗ್ರೆಸ್‌ ಪಕ್ಷಕ್ಕೆ ಉಳಿಗಾಲವಿಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 12:26 IST
Last Updated 25 ಆಗಸ್ಟ್ 2020, 12:26 IST
ಬಿ.ಸಿ.ಪಾಟೀಲ, ಕೃಷಿ ಸಚಿವ 
ಬಿ.ಸಿ.ಪಾಟೀಲ, ಕೃಷಿ ಸಚಿವ    

ಹಾವೇರಿ: ‘ಹಾಳೂರಲ್ಲಿ ಉಳಿದವನೇ ಗೌಡ’ ಎಂಬಂತೆ ಅಮ್ಮ–ಮಗ (ಸೋನಿಯಾಗಾಂಧಿ–ರಾಹುಲ್‌ಗಾಂಧಿ) ಒಬ್ಬರ ನಂತರ ಒಬ್ಬರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಉಳಿಗಾಲವಿಲ್ಲ ಎಂಬುದು ಗೊತ್ತಾಗಿಯೇ ನಾವು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ರಟ್ಟೀಹಳ್ಳಿ ತಾಲ್ಲೂಕಿನ ಮಗದ–ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಪಕ್ಷದಲ್ಲಿ ಸಮರ್ಥ ನಾಯಕರೇ ಸಿಗುತ್ತಿಲ್ಲ. ಗಾಂಧಿ ಕುಟುಂಬ ಹೊರತುಪಡಿಸಿ, ಹೊಸಬರಿಗೆ ಅವಕಾಶ ಕೊಟ್ಟರೆ ಪಕ್ಷ ಉಳಿಯುತ್ತದೆ. ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗದ ದುಸ್ಥಿತಿ ಕಾಂಗ್ರೆಸ್‌ನಲ್ಲಿದೆ ಎಂದು ಟೀಕಿಸಿದರು.

ಸೋನಿಯಾಗಾಂಧಿಯೇ ಮತ್ತೆ ಅಧ್ಯಕ್ಷರಾಗಿ ಮುಂದುವರಿಯಲಿ ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿಬಂದಿದೆ. ಅದು ಕಾಂಗ್ರೆಸ್‌ ಪಕ್ಷದ ದೌರ್ಬಲ್ಯ. ಇನ್ನೂ ಹಲವಾರು ಕಾಂಗ್ರೆಸ್‌ ಮುಖಂಡರು ಬಿಜೆಪಿ ಸೇರಲಿದ್ದಾರೆ. ಒಟ್ಟಿನಲ್ಲಿ ಇದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ನರೇಂದ್ರ ಮೋದಿ ಮುಂದೆ ರಾಹುಲ್‌ಗಾಂಧಿ ಯಾವ ರೀತಿಯಿಂದಲೂ ಸಮರ್ಥರಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.