ADVERTISEMENT

ಹಾವೇರಿ: ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 7:27 IST
Last Updated 19 ಜನವರಿ 2026, 7:27 IST
<div class="paragraphs"><p>ಹಾವೇರಿಯ ಕಾಗಿನೆಲೆ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು&nbsp;</p></div>

ಹಾವೇರಿಯ ಕಾಗಿನೆಲೆ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು 

   

ಹಾವೇರಿ: ನಗರದ ಕಾಗಿನೆಲೆ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕಾಗಿನೆಲೆ ರಸ್ತೆಯ ಒಂದು ಬದಿಯಲ್ಲಿ ಬಿಜೆಪಿ ಜಿಲ್ಲಾ ಘಟಕ ಕಚೇರಿಯ ಕಟ್ಟಡವಿದೆ. ಅದರ ಎದುರಿಗೆ ರಸ್ತೆಯ ಇನ್ನೊಂದು ಬದಿಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಿಸಲಾಗುತ್ತಿದೆ. ಭಾನುವಾರ ನಡೆದ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಾಸಕರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

ADVERTISEMENT

‘ಕಾಂಗ್ರೆಸ್ ಪಕ್ಷದ ಕಾರ್ಯಚಟುವಟಿಕೆಗೆ ಸ್ವಂತ ಕಟ್ಟಡದ ಅವಶ್ಯಕತೆಯಿತ್ತು. ಈಗ ಅದು ಈಡೇರುತ್ತಿದೆ. ಸಕಲ ಸೌಲಭ್ಯ ಒಳಗೊಂಡು ಕಚೇರಿ ಕಟ್ಟಡ ನಿರ್ಮಿಸಲಾಗುತ್ತಿದೆ. ಕೆಲವೇ ತಿಂಗಳಿನಲ್ಲಿ ಕಟ್ಟಡ ಉದ್ಘಾಟನೆ ಆಗಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.