ADVERTISEMENT

ಶಿಗ್ಗಾವಿ: ಬಿಜೆಪಿ ಶಾಸಕರ ಪಾದಯಾತ್ರೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 15:44 IST
Last Updated 30 ಜುಲೈ 2024, 15:44 IST
ಮುಡಾ ಹಗರಣದ ಬಗ್ಗೆ ಸುಳ್ಳು ಆರೋಪ ಮಾಡಿ ಬಿಜೆಪಿ ಶಾಸಕರು ಕೈಗೊಂಡಿರುವ ಪಾದಯಾತ್ರೆ ವಿರೋಧಿಸಿ ಶಿಗ್ಗಾವಿ ಪಟ್ಟಣದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
ಮುಡಾ ಹಗರಣದ ಬಗ್ಗೆ ಸುಳ್ಳು ಆರೋಪ ಮಾಡಿ ಬಿಜೆಪಿ ಶಾಸಕರು ಕೈಗೊಂಡಿರುವ ಪಾದಯಾತ್ರೆ ವಿರೋಧಿಸಿ ಶಿಗ್ಗಾವಿ ಪಟ್ಟಣದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಶಿಗ್ಗಾವಿ: ಮುಡಾ ಹಗರಣದ ಬಗ್ಗೆ ಸುಳ್ಳು ಆರೋಪ ಮಾಡಿ ಬಿಜೆಪಿ ಶಾಸಕರು ಮೈಸೂರಿನಿಂದ ಬೆಂಗಳೂರು ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ವಿರೋಧಿಸಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಬಿಜೆಪಿ ಶಾಸಕರ ವಿರೋಧ ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆ ಕೂಗಿದರು. ನಂತರ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದರು.

ಮಾಜಿ ಶಾಸಕ ಅಜ್ಮಂಪೀರ್ ಖಾದ್ರಿ ಮಾತನಾಡಿ, ‘ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದನ್ನು ಸಹಿಸದ ಬಿಜೆಪಿ ಮುಖಂಡರು ಇಲ್ಲ, ಸಲ್ಲದ ಆರೋಪ ಮಾಡುತ್ತಿದ್ದಾರೆ. ತಮ್ಮ ಆಡಳಿತದಲ್ಲಿನ ಹಗರಣಗಳನ್ನು ಮುಚ್ಚಿ ಹಾಕಲು ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

ADVERTISEMENT

ಮುಖಂಡರಾದ ಮಂಜುನಾಥ ತಿಮ್ಮಾಪುರ, ರವಿ ಕೋಣನವರ, ಶಂಭು ನೇತ್ರಿ, ಪ್ರದೀಪ ಗಿರಡ್ಡೆರ, ಬೀರೇಶ ಜಟ್ಟೆಪ್ಪನವರ, ಡಿ.ಯು.ಅಜ್ಜಣ್ಣನವರ, ಸುರೇಶ ಕೆಂಚಮ್ಮನವರ, ಮಲ್ಲಿಕಾರ್ಜುನ ಇಳಿಗೇರ, ರುದ್ರೇಶ ಗುಡಿಗೇರಿ, ಇಸ್ಮಾಯಿಲಸಾಬ ಗೌಡಗೇರಿ, ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.