ADVERTISEMENT

ಕಾಂಗ್ರೆಸ್ ತಂತ್ರಗಾರಿಕೆ ಫಲಿಸದು: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 4:01 IST
Last Updated 27 ಅಕ್ಟೋಬರ್ 2021, 4:01 IST
ಮಲಗುಂದ ಗ್ರಾಮದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್‌ ಶೋ ನಡೆಸಿದರು
ಮಲಗುಂದ ಗ್ರಾಮದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್‌ ಶೋ ನಡೆಸಿದರು   

ಅಕ್ಕಿಆಲೂರ: ಬಿಜೆಪಿರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕ್ಷೇತ್ರದಲ್ಲಿ ಮತಬೇಟೆ ನಡೆಸಿದರು. ಮಂಗಳವಾರ ಉಪ್ಪಣಸಿ, ಕೂಸನೂರು, ಅಕ್ಕಿಆಲೂರು, ಶಿರಗೋಡ, ಗೊಂದಿ, ಮಲಗುಂದ ಸೇರಿದಂತೆ ಹಲವು ಗ್ರಾಮಗಳಲ್ಲಿ ರೋಡ್ ಶೋ ನಡೆಸಿದರು.

ಕ್ಷೇತ್ರದ ಯುವ ಕಾರ್ಯಕರ್ತರಲ್ಲಿ ಉತ್ಸಾಹ ಇರುವುದನ್ನು ಕಾಣುತ್ತಿದ್ದೇನೆ. ಕಾಂಗ್ರೆಸ್ ಏನೇ ಅಪಪ್ರಚಾರ ನಡೆಸಿದರೂ ಪ್ರಯೋಜನವಾಗುವುದಿಲ್ಲ. ಶಿವರಾಜ ಸಜ್ಜನರ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ದೇಶ ಮತ್ತು ರಾಜ್ಯಕ್ಕೆ ಬಿಜೆಪಿ ಸಮರ್ಥ ನಾಯಕತ್ವ ನೀಡಿದೆ. ಬಿಜೆಪಿ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿವೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಎಲ್ಲ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇಂದಿಗೂ ಕೂಡ ಜನ ಇವುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಗೆಲ್ಲಲೇ ಬೇಕು ಎನ್ನುವ ಜಿದ್ದಿಗೆ ಬಿದ್ದಿದೆ. ಆದರೆ ಕಾಂಗ್ರೆಸ್‍ನ ಯಾವ ತಂತ್ರಗಾರಿಕೆಗಳೂ ಇಲ್ಲಿ ಫಲ ನೀಡುವುದಿಲ್ಲ. ಸಿ.ಎಂ.ಉದಾಸಿ ಅವರು ಶಾಸಕ, ಸಚಿವರಿದ್ದಾಗ ಕ್ಷೇತ್ರದ ಕಲ್ಯಾಣಕ್ಕೆ ಸಾಕಷ್ಟು ಅನುದಾನ ತಂದಿದ್ದಾರೆ. ಅವರ ಪುತ್ರ 3 ಬಾರಿ ಸಂಸದರಾಗಿರುವ ಶಿವಕುಮಾರ ಉದಾಸಿ ಅವರೂ ಸಹ ಕ್ಷೇತ್ರದ ಅಭಿವೃದ್ಧಿಗೆ ದುಡಿದಿದ್ದಾರೆ. ನಮ್ಮ ಅಭ್ಯರ್ಥಿ ಶಿವರಾಜ ಸಜ್ಜನರ ಅವರು ಉದಾಸಿ ಅವರಂತೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗಲು ಸಮರ್ಥರಿದ್ದು, ಗೆಲ್ಲುವ ಪೂರ್ಣ ವಿಶ್ವಾಸವಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.