ADVERTISEMENT

ಬ್ಯಾಡಗಿ | 'ಗ್ರಾಹಕರು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಿ '

ಕಾನೂನು ಸಾಕ್ಷರತಾ ಕಾರ್ಯಕ್ರಮ: ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 3:18 IST
Last Updated 31 ಡಿಸೆಂಬರ್ 2025, 3:18 IST
ಬ್ಯಾಡಗಿ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಮಾತನಾಡಿದರು 
ಬ್ಯಾಡಗಿ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಮಾತನಾಡಿದರು    

ಬ್ಯಾಡಗಿ: ‘ಗುಣಮಟ್ಟದ ವಸ್ತುವನ್ನು ನ್ಯಾಯಯುತ ಬೆಲೆಗೆ ಪಡೆದುಕೊಳ್ಳುವ ಹಕ್ಕು ಪ್ರತಿಯೊಬ್ಬ ಗ್ರಾಹಕರಿಗೆ ಇದೆ. ವಸ್ತುವಿನ ಗುಣಮಟ್ಟದಲ್ಲಿ ವ್ಯತ್ಯಾಸವಾದರೆ ಅದನ್ನು ಪ್ರಶ್ನಿಸುವ ಗುಣವನ್ನು ಗ್ರಾಹಕರು ಬೆಳೆಸಿಕೊಳ್ಳಬೇಕು’ ಎಂದು ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಶೇಷ ಚೇತನರ ಸಬಲೀಕರಣ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನ್ಯಾಯಾಧೀಶ ಸುರೇಶ ವಗ್ಗನವರ ಮಾತನಾಡಿ, ‘ವಿಶೇಷ ಚೇತನರಿಗೆ ಸರ್ಕಾರ ಅನೇಕ ಸೌಲಭ್ಯ ನೀಡಿದ್ದು, ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳ್ಳಬೇಕು’ ಎಂದರು.

ADVERTISEMENT

ತಹಶೀಲ್ದಾರ್‌ ಚಂದ್ರಶೇಖರ ನಾಯಕ ಮಾತನಾಡಿದರು. ಶ್ರೀನಿವಾಸ ಕೊಣ್ಣೂರ ಉಪನ್ಯಾಸ ನೀಡಿದರು. ರಾಜಣ್ಣ ನ್ಯಾಮತಿ, ಕೆ.ಆರ್. ಲಮಾಣಿ, ಸುಮಂಗಲಾ ಐಬಕ್ಕನವರ, ವಕೀಲರ ಸಂಘದ ಸದಸ್ಯರಾದ ಭಾರತಿ ಕುಲಕರ್ಣಿ, ಸುರೇಶ ಕಾಟೇನಹಳ್ಳಿ, ನಾಗರಾಜ ಅಗಸನಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.