ADVERTISEMENT

ಹಾವೇರಿ ಜಿಲ್ಲೆಯಾದ್ಯಂತ ನಿರಂತರ ಮಳೆ: ಎಲ್ಲ ಶಾಲೆಗಳಿಗೆ ಎರಡು ದಿನ ರಜೆ

​ಪ್ರಜಾವಾಣಿ ವಾರ್ತೆ
Published 20 ಮೇ 2022, 6:29 IST
Last Updated 20 ಮೇ 2022, 6:29 IST
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ   

ಹಾವೇರಿ: ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಮೇ 20 ಮತ್ತು 21ರಂದು ( ಶುಕ್ರವಾರ ಮತ್ತು ಶನಿವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುಂದುವರಿಯುವ ಸಾಧ್ಯತೆಯ ಮುನ್ಸೂಚನೆ ನೀಡಿರುವ ಕಾರಣ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾವೇರಿಗೆ ಕೆಎಸ್‌ಎನ್‌ಡಿಎಂಸಿಯಿಂದ ‘ಎಲ್ಲೋ ಅಲರ್ಟ್‌’ಬಂದಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಜನ-ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.