ADVERTISEMENT

ನಕಲಿ ಬಿತ್ತನೆ ಬೀಜ ಮಾರಾಟಕ್ಕೆ ಕಡಿವಾಣ ಹಾಕಿ: ಸಂಜಯ ಶೆಟ್ಟಣ್ಣನವರಿಗೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 4:55 IST
Last Updated 21 ಜೂನ್ 2022, 4:55 IST
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ್‌ ಅವರಿಗೆ ಮನವಿ ಸಲ್ಲಿಸಿದರು
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ್‌ ಅವರಿಗೆ ಮನವಿ ಸಲ್ಲಿಸಿದರು   

ಹಾವೇರಿ: ಜಿಲ್ಲೆಯಾದ್ಯಂತ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ದೊರೆಯಬೇಕು ಮತ್ತು ನಕಲಿ ಬೀಜ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಲಮಾಣಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಬೀಜ ಮತ್ತು ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಸರ್ಕಾರ ದರ ಏರಿಕೆಯನ್ನು ಹಿಂಪಡೆಯಬೇಕು.ಜಿಲ್ಲೆಯಲ್ಲಿ ನಕಲಿ ಬೀಜ ಮಾರಾಟಗಾರರ ಜಾಲವೇ ಇದೆ. ರಸಗೊಬ್ಬರದ ಅಭಾವ ಸೃಷ್ಟಿಸಿ, ನಂತರ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಕೆ. ರಾಜನಹಳ್ಳಿ ಮಾತನಾಡಿ, ಕೇಂದ್ರ ಸರ್ಕಾರವು ಹಿಂಪಡೆದ ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರವೂ ಆದಷ್ಟು ಬೇಗನೆ ಹಿಂಪಡೆಯಬೇಕು. ಡಾ. ಸ್ವಾಮಿನಾಥನ್ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ADVERTISEMENT

ಶಿವಯೋಗಿ ಗಡಾದ, ಲೋಕೇಶ ಕಡೇಮನಿ, ಶಿವಾನಂದ ಹೊಸಮನಿ, ವೆಂಕಟೇಶ ಹೊಸಮನಿ, ಸಂಜೀವ ಮಡಿವಾಳರ, ಶಶಿಕಲಾ ಆರೇಕಟ್ಟಿ, ಲಕ್ಷ್ಮೀ ಸಿ.ಬಿ, ಚಂದ್ರಶೇಖರ ಉಪ್ಪಿನ, ಕುಸುಮಾ ಆಸಾದಿ, ರೇಣುಕಾ ಎಮ್ ಲಮಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.