ADVERTISEMENT

60 ವರ್ಷದ ವೃದ್ಧೆಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 16:21 IST
Last Updated 29 ಜೂನ್ 2020, 16:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಾವೇರಿ: ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ 69 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 25 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 44 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಹಾವೇರಿ ತಾಲ್ಲೂಕು ಆಲದಕಟ್ಟಿ ಗ್ರಾಮದ ಬಸವೇಶ್ವರನಗರದ ನಿವಾಸಿ 60 ವರ್ಷದ ವೃದ್ಧೆ (ಪಿ-69) ಕೆಮ್ಮು ಮತ್ತು ಜ್ವರದ ಕಾರಣ ಜೂನ್ 24ರಂದು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜೂನ್ 25ರಂದು ವೃದ್ಧೆಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 27ರಂದು ಕೋವಿಡ್ ಪಾಸಿಟಿವ್ ವರದಿ ಬಂದಿದೆ.

ಸದರಿ ವೃದ್ಧೆ ಹಾಲಿ ವಾಸಿಸುತ್ತಿದ್ದ ಹಾನಗಲ್ ತಾಲ್ಲೂಕಿನ ಉಪ್ಪಣಸಿ ಗ್ರಾಮದ ಮನೆ ಸೇರಿದಂತೆ ಸುತ್ತಲಿನ 100 ಮೀ.ಪ್ರದೇಶವನ್ನು ‘ಕಂಟೈನ್‌ಮೆಂಟ್‌ ಜೋನ್’ ಆಗಿ ಪರಿವರ್ತಿಸಲಾಗಿದೆ ಹಾಗೂ ಸಂಪೂರ್ಣ ಗ್ರಾಮವನ್ನು ‘ಬಫರ್ ಜೋನ್’ ಆಗಿ ಪರಿಗಣಿಸಲಾಗಿದೆ. ಇನ್ಸಿಡೆಂಟಲ್ ಕಮಾಂಡರ್ ಆಗಿ ಹಾನಗಲ್ ತಹಶೀಲ್ದಾರ ಅವರನ್ನು ನೇಮಕ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.