ADVERTISEMENT

‘ವಾತ್ಸಲ್ಯ ಕಾರ್ಯಕ್ರಮ’ ರಾಜ್ಯಕ್ಕೆ ವಿಸ್ತರಿಸಲು ಚಿಂತನೆ

ಹಾವೇರಿ ಜಿಲ್ಲೆಯ 2.98 ಲಕ್ಷ ಮಕ್ಕಳಿಗೆ ‘ಆರೋಗ್ಯ ಕಾರ್ಡ್‌’ ವಿತರಣೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 21:49 IST
Last Updated 29 ಜೂನ್ 2021, 21:49 IST
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪತ್ರಿಕಾಗೋಷ್ಠಿ ನಡೆಸಿದರು. ಸಿಇಒ ಮೊಹಮ್ಮದ್‌ ರೋಶನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಇದ್ದಾರೆ
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪತ್ರಿಕಾಗೋಷ್ಠಿ ನಡೆಸಿದರು. ಸಿಇಒ ಮೊಹಮ್ಮದ್‌ ರೋಶನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಇದ್ದಾರೆ   

ಹಾವೇರಿ: ‘ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಹಾವೇರಿ ಜಿಲ್ಲೆಯಲ್ಲಿ ಕೈಗೊಂಡಿರುವ ‘ವಾತ್ಸಲ್ಯ’ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ 18 ವರ್ಷದೊಳಗಿನ 2.98 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಮಾಡುವ ಗುರಿಯನ್ನು ರಾಜ್ಯದಲ್ಲೇ ಮೊದಲ ಬಾರಿಗೆ ಹಾಕಿಕೊಳ್ಳಲಾಗಿದೆ. ಜೂನ್‌ 25ರಿಂದ ಆರಂಭಗೊಂಡಿರುವ ಈ ಕಾರ್ಯಕ್ರಮ ಜುಲೈ 30ರೊಳಗೆ ಪೂರ್ಣಗೊಳ್ಳಲಿದೆ ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT