ADVERTISEMENT

ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 9:15 IST
Last Updated 26 ಆಗಸ್ಟ್ 2020, 9:15 IST
ವಿರೂಪಾಕ್ಷಪ್ಪ ಬಳ್ಳಾರಿ, ಬ್ಯಾಡಗಿ ಶಾಸಕ
ವಿರೂಪಾಕ್ಷಪ್ಪ ಬಳ್ಳಾರಿ, ಬ್ಯಾಡಗಿ ಶಾಸಕ   

ಹಾವೇರಿ: ಬ್ಯಾಡಗಿ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರಿಗೆ ಕೋವಿಡ್‌ ದೃಢಪಟ್ಟಿದ್ದು,ಹುಬ್ಬಳ್ಳಿಯ ಕಿಮ್ಸ್‌ನ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗಿದೆ.

ಶಾಸಕರಿಗೆ ಸೋಂಕಿನ ಲಕ್ಷಣಗಳಿರಲಿಲ್ಲ. ಅವರ ಆರೋಗ್ಯ ಸ್ಥಿರವಾಗಿದೆ. ಕೋವಿಡ್‌ ದೃಢಪಟ್ಟಿದ್ದರಿಂದ ಮಂಗಳವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸೋಮವಾರ ಬ್ಯಾಡಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಸಂಪರ್ಕದಲ್ಲಿದ್ದ ಮುಖಂಡರು ಸ್ವಯಂಪ್ರೇರಣೆಯಿಂದ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಶಾಸಕರು ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.