ADVERTISEMENT

ಹಾವೇರಿ ನಗರ ಪೊಲೀಸ್‌ ಠಾಣೆ ಸೀಲ್‌ಡೌನ್‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 16:25 IST
Last Updated 8 ಜುಲೈ 2020, 16:25 IST
ಹಾವೇರಿ ನಗರ ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಿರುವ ದೃಶ್ಯ
ಹಾವೇರಿ ನಗರ ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಿರುವ ದೃಶ್ಯ   

ಹಾವೇರಿ: ಮೂವರು ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಹಾವೇರಿಶಹರ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಸ್ಟೇಷನ್ ಕಚೇರಿ ಕಾರ್ಯವನ್ನು ಪಕ್ಕದಲ್ಲಿರುವ ಸಂಚಾರ ಪೊಲೀಸ್ ಠಾಣೆಗೆ ತಾತ್ಕಾಲಿಕವಾಗಿ ಸ್ಥಳಾಂತರಗೊಂಡಿದ್ದು, ಅಲ್ಲಿಂದ ಕರ್ತವ್ಯ ನಿರ್ವಹಣೆಯನ್ನು ನಿರ್ವಹಿಸಲಾಗುತ್ತಿದೆ.

ಈಗಾಗಲೇ ಠಾಣೆಯನ್ನು ಎರಡು ಬಾರಿ ಸ್ಯಾನಿಟೈಸ್ ಮಾಡಲಾಗಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮತ್ತೊಮ್ಮೆ ಗಂಟಲು ದ್ರವ ಪರೀಕ್ಷಿಸಿ ಸ್ಟೇಷನ್ ಆರಂಭಿಸಲಾಗುತ್ತದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.