ಹಾವೇರಿ: ಆರೋಗ್ಯ ಇಲಾಖೆಯ ಕ್ವಾಲಿಟಿ ಮ್ಯಾನೇಜರ್, ಕಂದಾಯ ಇಲಾಖೆಯ ಎ.ಎಸ್.ಓ. ಹಾಗೂ ಕೆ.ಇ.ಬಿ., ಪುರಸಭೆ, ಆರೋಗ್ಯ, ಪೊಲೀಸ್ ಇಲಾಖೆ ನೌಕರರು ಒಳಗೊಂಡಂತೆ ಜಿಲ್ಲೆಯಲ್ಲಿ ಗುರುವಾರ 160 ಮಂದಿಗೆಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಹಾಗೂ 37 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ತಾಲ್ಲೂಕುವಾರು ವಿವರ
ಶಿಗ್ಗಾವಿ-32, ಬ್ಯಾಡಗಿ ಹಾಗೂ ರಾಣೆಬೆನ್ನೂರು ತಲಾ 30, ಹಾವೇರಿ-25, ಹಿರೇಕೆರೂರು-19, ಹಾನಗಲ್ ಹಾಗೂ ಸವಣೂರ ತಾಲ್ಲೂಕು ತಲಾ 10 ಹಾಗೂ ಇತರೆ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಗುಣಮುಖರಾಗಿ ಸವಣೂರು-21, ಬ್ಯಾಡಗಿ-14 ರಾಣೇಬೆನ್ನೂರ ತಾಲೂಕಿನ ಇಬ್ಬರು ಬಿಡುಗಡೆ ಹೊಂದಿದ್ದಾರೆ.
ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೈನ್ಮೆಂಟ್ ಜೋನ್ ಹಾಗೂ ಬಫರ್ ಜೋನ್ ಆಗಿ ಘೋಷಿಸಲಾಗಿದೆ. ಆಯಾ ತಾಲ್ಲೂಕು ದಂಡಾಧಿಕಾರಿಗಳನ್ನು ಇನ್ಸಿಡೆಂಟಲ್ ಕಮಾಂಡರ್ ಆಗಿ ನೇಮಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.