ADVERTISEMENT

ಸುಳ್ಳು ಸುದ್ದಿ ವೈರಲ್‌ ಮಾಡಿದ ವೈದ್ಯನ ವಿರುದ್ಧ ಕ್ರಿಮಿನಲ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 14:43 IST
Last Updated 14 ಮಾರ್ಚ್ 2020, 14:43 IST

ಹಾವೇರಿ: ನಗರದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣವೊಂದು ದೃಢಪಟ್ಟಿದೆ ಎಂದು ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದರಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ಆಯುರ್ವೇದಿಕ್‌ ವೈದ್ಯ ಶರಣು ಅಂಗಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಜನರಲ್ಲಿ ಕೊರೊನಾ ವೈರಸ್‌ ಬಗ್ಗೆ ಭೀತಿ ಮೂಡಿದೆ. ಈ ದೃಷ್ಟಿಯಿಂದ ಸುಳ್ಳು ಸುದ್ದಿ ಹಬ್ಬಿಸಿದವನ ವಿರುದ್ಧ ಕ್ರಮ ನಿಶ್ಚಿತ ಎಂದರು.

ವಿದೇಶಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಬಂದ 10 ಮಂದಿ ಮೇಲೆ ತೀವ್ರ ನಿಗಾ ಇಡಲಾಗಿದೆ. ನಿತ್ಯ ಅವರ ಆರೋಗ್ಯದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.