ADVERTISEMENT

ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 16:30 IST
Last Updated 6 ಮಾರ್ಚ್ 2023, 16:30 IST
ಹಾವೇರಿ ತಾಲ್ಲೂಕಿನ ನಾಗನೂರ ಗ್ರಾಮದಲ್ಲಿ ತುಂಗಾ ಮೇಲ್ದಂಡೆ ಯೋಜನೆ (ಯುಟಿಪಿ) ಕಾಲುವೆಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ನಾಗನೂರ ಗ್ರಾಮದ ರೈತರು ಹಾವೇರಿ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು
ಹಾವೇರಿ ತಾಲ್ಲೂಕಿನ ನಾಗನೂರ ಗ್ರಾಮದಲ್ಲಿ ತುಂಗಾ ಮೇಲ್ದಂಡೆ ಯೋಜನೆ (ಯುಟಿಪಿ) ಕಾಲುವೆಯಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ನಾಗನೂರ ಗ್ರಾಮದ ರೈತರು ಹಾವೇರಿ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು   

ಹಾವೇರಿ: ತಾಲ್ಲೂಕಿನ ನಾಗನೂರ ಗ್ರಾಮದಲ್ಲಿ ತುಂಗಾ ಮೇಲ್ದಂಡೆ ಯೋಜನೆ (ಯುಟಿಪಿ) ಕಾಲುವೆಯ ಕಳಪೆ ಕಾಮಗಾರಿಯಿಂದ ನೀರು ಸೋರಿಕೆಯಾಗಿ ಬೆಳೆ ಹಾನಿಯಾಗುತ್ತಿದೆ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದು ಪರಿಹಾರ ನೀಡಬೇಕು ಎಂದು ನಾಗನೂರ ಗ್ರಾಮದ ರೈತರು ಹಾವೇರಿ ತಹಶೀಲ್ದಾರ್‌ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಲುವೆ ಮಾಡುವಾಗ ರೈತರ ಜಮೀನುಗಳಲ್ಲಿ ಸೂಕ್ತವಾದ ಸಿ.ಡಿ. ಮತ್ತು ರಸ್ತೆಗಳನ್ನು ನಿರ್ಮಾಣ ಮಾಡಿಲ್ಲ. ಕಾಲುವೆ ಕಾಮಗಾರಿ ಕಳಪೆಯಾಗಿದ್ದು, ಮಳೆಗಾಲದಲ್ಲಿ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾಳಾಗುತ್ತಿವೆ. ರೈತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಕೊಟ್ಟರೂ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು.

ಕಾಲುವೆ ನಿರ್ಮಾಣಕ್ಕೆ ಜಮೀನು ಕೊಟ್ಟ ರೈತರಿಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಇತ್ತೀಚಿಗೆ ನಾಗನೂರ ಗ್ರಾಮದಲ್ಲಿ ನಡೆದ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ರೈತರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್‌ ಗಿರೀಶ ಸ್ವಾದಿ, ‘ಗುರುವಾರ ನಾಗನೂರು ಗ್ರಾಮಕ್ಕೆ ಎಂಜಿನಿಯರ್‌ ಜೊತೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.