ADVERTISEMENT

ಹಾವೇರಿ | ಬೆಳೆ ಹಾನಿ: ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 2:40 IST
Last Updated 2 ಸೆಪ್ಟೆಂಬರ್ 2025, 2:40 IST
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಜಮೀನೊಂದರಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ಪರಿಶೀಲನೆ ನಡೆಸಿದರು
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಜಮೀನೊಂದರಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ಪರಿಶೀಲನೆ ನಡೆಸಿದರು   

ಹಾವೇರಿ: ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬೆಳೆ ಹಾನಿ ಉಂಟಾಗಿದ್ದು, ಅಂಥ ಜಮೀನುಗಳಿಗೆ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ಭೇಟಿ ನೀಡಿದರು.

ಮುಂಗಾರು ಮಳೆ ನಂಬಿಕೊಂಡು ಬಿತ್ತನೆ ಮಾಡಿರುವ ಬಹುತೇಕ ರೈತರು, ಬೆಳೆ ನಷ್ಟದಿಂದಾಗಿ ಕಣ್ಣೀರು ಸುರಿಸುತ್ತಿದ್ದಾರೆ. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ಅತಿಯಾದ ಮಳೆ: ಕೊಳೆತ ಬೆಳೆ’ ಶೀರ್ಷಿಕೆಯಡಿ ಸೆ. 1ರಂದು ವಿಶೇಷ ವರದಿ ಪ್ರಕಟಿಸಲಾಗಿತ್ತು.

ವರದಿ ಗಮನಿಸಿದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಖುದ್ದಾಗಿ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ರಟ್ಟೀಹಳ್ಳಿ ಹಾಗೂ ಹಿರೆಕೇರೂರು ತಾಲ್ಲೂಕಿನಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ, ಬೆಳೆಗಳನ್ನು ವೀಕ್ಷಿಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.

ಚಿಕ್ಕೇಡಚಿ, ಹಿರೇಮೊರಬ, ತಿಪ್ಪಾಯಿಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜಮೀನುಗಳಲ್ಲಿ ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ಜೊತೆಗೆ, ಹಾನಿಯಾದ ಜಮೀನಿನ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ ಕಚೇರಿಗೆ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.