ADVERTISEMENT

ಹಾವೇರಿ: ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 6:18 IST
Last Updated 1 ಜನವರಿ 2026, 6:18 IST
   

ಹಾವೇರಿ: ‘ರಾಜ್ಯ ಸರ್ಕಾರದ ಇ–ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2025–26ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.

‘ಗೂಗಲ್ ಪ್ಲೇಸ್ಟೋರ್‌ನಲ್ಲಿ ‘ಹಿಂಗಾರು ರೈತರ ಬೆಳೆ ಸಮೀಕ್ಷೆ 2025–26’ ಹೆಸರಿನಲ್ಲಿ ಆ್ಯಪ್‌ ಇರಲಿದೆ. ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮೊಬೈಲ್‌ನಲ್ಲಿ ಇನ್‌ಸ್ಟಾಲ್‌ ಮಾಡಿ, ಫೋಟೊ ಸಮೇತ ಬೆಳೆ ಮಾಹಿತಿ ಅಪ್‌ಲೋಡ್ ಮಾಡಬಹುದು’ ಎಂದು ಹೇಳಿದ್ದಾರೆ.

‘ರೈತರು ಆ್ಯಪ್‌ ಮೂಲಕ ನೀಡುವ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಬಳಸಲಾಗುತ್ತದೆ. ಆದ್ದರಿಂದ, ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿ ದಾಖಲಿಸಬೇಕು. ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.