ADVERTISEMENT

ಹಾವೇರಿ| ಸೆ. 6ರಿಂದ 2 ದಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 6:03 IST
Last Updated 4 ಸೆಪ್ಟೆಂಬರ್ 2025, 6:03 IST
   

ಹಾವೇರಿ: ನಗರದಲ್ಲಿ ಸೆ. 6 ಮತ್ತು 7ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸಲು ಆನ್‌ಲೈನ್‌ ಮೂಲಕ ನೋಂದಣಿ ಆರಂಭಿಸಲಾಗಿದೆ.

ಪ್ರಕಟಣೆ ನೀಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಲತಾ, ‘ನೋಂದಣಿ ಮಾಡಿದ ಕ್ರೀಡಾಪಟುಗಳಿಗೆ ಮಾತ್ರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ’ ಎಂದಿದ್ದಾರೆ.

‘ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.