ADVERTISEMENT

ಮನೆಯ ನಂದಾದೀಪ ಹೆಣ್ಣು: ಬಸವರಾಜ ಡಿ.ಸಿ.

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 13:59 IST
Last Updated 13 ಅಕ್ಟೋಬರ್ 2020, 13:59 IST
ಹಾವೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಮಂಗಳವಾರ ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಿತು 
ಹಾವೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಮಂಗಳವಾರ ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಿತು    

ಹಾವೇರಿ: ‘ಹೆಣ್ಣು ಮನೆಯ ನಂದಾದೀಪವಿದ್ದಂತೆ. ತಾಯಿಯಾಗಿ, ಮಡದಿಯಾಗಿ, ಸಹೋದರಿಯಾಗಿ ಹೆಣ್ಣು ಬಹುಪಾತ್ರಗಳನ್ನು ನಿಭಾಯಿಸುತ್ತಾಳೆ. ಆದರೆ ಮಗಳಾಗಿ ಬೇಡ ಎಂಬ ಮನಸ್ಥಿತಿಯನ್ನು ಮೊದಲು ಹೋಗಲಾಡಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಡಿ.ಸಿ. ಹೇಳಿದರು.

‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಅವರನ್ನು ಸಬಲರನ್ನಾಗಿ ಮಾಡಬೇಕು. ಹೆಣ್ಣು ಭ್ರೂಣ ಹತ್ಯೆ ತಡೆದು ಲಿಂಗಾನುಪಾತ ಸರಿಪಡಿಸುವಲ್ಲಿ ಸಮಾಜದ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಕರೆ ನೀಡಿದರು.

‘ಕಾರ್ಯಕ್ರಮ ಉದ್ಘಾಟಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಮಾತನಾಡಿ, ಲಿಂಗ ತಾರತಮ್ಯ ಎನ್ನುವುದು ಅನಾದಿ ಕಾಲದಿಂದಲೂ ಒಂದು ಪಿಡುಗಾಗಿದೆ ಈ ತಾರತಮ್ಯದಿಂದ ಸಮಾಜದಲ್ಲಿ ಲಿಂಗ ಅನುಪಾತದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ, ಶೋಷಣೆ, ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಿ ಮಹಿಳೆಯರು ಬೆಳೆಯಬೇಕು’ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌. ಪಾಟೀಲ ಮಾತನಾಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೆರ್, ಸಂರಕ್ಷಣಾಧಿಕಾರಿ ಉಮಾ ಕೆ.ಎಸ್., ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳ ತಾಯಂದಿರು ಹಾಜರಿದ್ದರು. ಮಾಲಾ ಬಳಿಗಾರ ವಂದಿಸಿದರು. ಶಿಲ್ಪಾ ಸಿದ್ದಮ್ಮನವರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.