ADVERTISEMENT

ಮತಗಟ್ಟೆಗಳ ಸಿದ್ಧತೆ ಪರಿಶೀಲಿಸಿದ ಡಿ.ಸಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 15:34 IST
Last Updated 8 ಅಕ್ಟೋಬರ್ 2020, 15:34 IST
ಹಾವೇರಿ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಗುರುವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿದರು 
ಹಾವೇರಿ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಗುರುವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ, ಸಿದ್ಧತೆ ಪರಿಶೀಲಿಸಿದರು    

ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಅ.28ರಂದು ನಡೆಯಲಿರುವ ಚುನಾವಣೆಯ ಮತಗಟ್ಟೆಗಳ ಸಿದ್ಧತೆ ಕುರಿತಂತೆ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪರಿಶೀಲನೆ ನಡೆಸಿದರು.

ಜಿಲ್ಲೆಯ ಹಲಗೇರಿ, ರಟ್ಟೀಹಳ್ಳಿ, ಹೊಸಕಟ್ಟೆ, ತಿಳವಳ್ಳಿ, ಅಕ್ಕಿಆಲೂರ ಮತಗಟ್ಟೆಗಳಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ, ಕಟ್ಟಡದ ಸ್ಥಿತಿಗತಿ, ಶೌಚಾಲಯದ ವ್ಯವಸ್ಥೆ, ಅಂಗವಿಕಲ ಮತದಾರರಿಗೆ ಅಗತ್ಯವಾದ ರ‍್ಯಾಂಪ್‌ ವ್ಯವಸ್ಥೆ, ಪೀಠೋಪಕರಣಗಳು ಸೇರಿದಂತೆ ಮೂಲಸೌಕರ್ಯ ಹಾಗೂ ಭದ್ರತಾ ವಿಷಯಗಳ ಕುರಿತಂತೆ ಪರಿಶೀಲನೆ ನಡೆಸಿದರು. ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ನೀಡಿದರು.

ಸ್ಥಳೀಯ ತಹಶೀಲ್ದಾರ್‌ಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದು, ಮತಗಟ್ಟೆಗಳ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿಗಗೆ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.