ಹಾವೇರಿ: ಕೋವಿಡ್ ಕಾರಣ ಸಂಕಷ್ಟದಲ್ಲಿರುವ ನೋಂದಾಯಿತ ಕಾರ್ಮಿಕರ ಪ್ರತಿ ಕುಟುಂಬಕ್ಕೂ ಆಹಾರ ಪದಾರ್ಥಗಳ ಕಿಟ್ ಹಾಗೂ ಸುರಕ್ಷತಾ ಕಿಟ್ ನೀಡಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.
ನಗರದ ಡಿ.ದೇವರಾಜ ಅರಸು ಭವನದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಅವರು ಮಾತನಾಡಿದರು. ಕಾರ್ಮಿಕರ ಪ್ರತಿ ಕುಟುಂಬಗಳಿಗೆ ಕಿಟ್‍ಗಳನ್ನು ವಿತರಿಸಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ, ನಗರಸಭೆ ಸದಸ್ಯರಾದ ನಾಗರಾಜ ಹಿರೇಮಠ, ಗಿರೀಶ್ ತುಪ್ಪದ, ಬಾಬುಸಾಬ್ ಮೋಮಿನ್‍ಗಾರ, ಶಿವರಾಜ್ ಮತ್ತಿಕಟ್ಟಿ, ಲಲಿತಾ ಗುಂಡೆನಹಳ್ಳಿ, ಜಗದೀಶ, ಮಂಜುನಾಥ್ ಇಟಗಿ, ನಜೀರ್ ನದಾಫ್, ರೋಹಿಣಿ ಪಾಟೀಲ, ರತ್ನ, ಚನ್ನಮ್ಮ ಬ್ಯಾಡಗಿ, ಪಾರ್ವತಿ ಪಾಟೀಲ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಲಲಿತಾ ಸಾತೇನಹಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.