ADVERTISEMENT

ಹಾವೇರಿ: ’ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ’

ರೈತ ರವೀಂದ್ರಗೌಡ ಎಫ್. ಪಾಟೀಲ ಸರ್ಕಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2023, 15:47 IST
Last Updated 27 ಆಗಸ್ಟ್ 2023, 15:47 IST

ರಾಣೆಬೆನ್ನೂರು: ಜಿಲ್ಲೆಯಾದ್ಯಂತ ಮುಂಗಾರು ಮಳೆ ‌ಕೈಕೊಟ್ಟಿದ್ದರಿಂದ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಅಪಾರ ನಷ್ಟ ಅನುಭವಿಸಿದ ರೈತರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಎಫ್. ಪಾಟೀಲ ಒತ್ತಾಯಿಸಿದ್ದಾರೆ.

ಬೆಳೆಗಳಿಗೆ ವಿಮೆ ಮಾಡಿಸಿದ ರೈತ ಕೇಂದ್ರದ ರೈತ ಸುರಕ್ಷ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆವಿಮೆ ಹಣವಾದರೂ ಬರುತ್ತೆಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದರೆ, ವಿಮಾ ಕಂಪನಿಗಳು ಮತ್ತೊಮ್ಮೆ ಬೆಳೆ ಸಮೀಕ್ಷೆಗೆ ಮುಂದಾಗಿರುವುದು ಅವೈಜ್ಞಾನಿಕ ನೀತಿಯಾಗಿದೆ. ಈ ಬೆಳೆ ಸಮೀಕ್ಷೆ ಕೈಬಿಟ್ಟು ಸರ್ಕಾರ ಕೂಡಲೇ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಬರಗಾರಲ ಪೀಡಿತ ಪ್ರದೇಶವೆಂದು ಘೋಷಿಸಿದರೆ ಬೆಳೆ ವಿಮೆ ಹಣವನ್ನು ರೈತರಿಗೆ ತಲುಪಿಸಬೇಕಾಗುತ್ತದೆ. ತಕ್ಷಣವೇ ಶೇ25 ವಿಮಾ ಹಣ ರೈತರಿಗೆ ಪಾವತಿಸಬೇಕಾಗುತ್ತದೆ ಎಂಬ ಆತಂಕದಿಂದ ಸರ್ಕಾರವನ್ನು ಗೊಂದಲದಲ್ಲಿ ಸಿಲುಕಿಸುವ ಮತ್ತು ಬೆಳೆ ನಷ್ಟದ ವರದಿ ಮುಚ್ಚಿ ಹಾಕಲು ವಿಮಾ ಕಂಪನಿಯವರು ಬೇರೆ ಬೇರೆ ದಾರಿಯಲ್ಲಿ ಸಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.