ರಟ್ಟೀಹಳ್ಳಿ: ‘ಪಟ್ಟಣದಲ್ಲಿ ಹಂದಿಗಳ ಉಪಟಳ ಹೆಚ್ಚಾಗಿದ್ದು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಹಂದಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು’ ಎಂದು ಸ್ಥಳೀಯ ನಿವಾಸಿ ವಿರೇಶ ಬೆಣ್ಣಿ ಆಗ್ರಹಿಸಿದರು.
ಪಟ್ಟಣ ಪಂಚಾಯಿತಿ ಅಧಿಕಾರಿಗೆ ಈ ಕುರಿತು ಮಾಹಿತಿ ನೀಡಿದ ಅವರು, ‘ಕ್ರಮ ಕೈಗೊಳ್ಳದಿದ್ದರೆ ಪಟ್ಟಣ ಪಂಚಾಯಿತಿ ಎದುರಿಗೆ ಹೆಂಡತಿ, ಮಕ್ಕಳೊಂದಿಗೆ ಉಪವಾಸ ಸತ್ಯಾಗ್ರಹ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಎಚ್ಚರಿಸಿದರು.
ಕಳೆದ ವರ್ಷ ಫೆಬ್ರುವರಿಯಲ್ಲೂ ಹಂದಿಗಳ ಕಾಟ ಹೆಚ್ಚಾದ ಸಂದರ್ಭದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಆಗ ವಿರೇಶ ಬೆಣ‍್ಣಿ ಹಾಗೂ ವೀರಣ್ಣ ಯಶೇಪ್ಪನವರ ಅವರು ನೀರು ತ್ಯಜಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದರು. ಬಳಿಕ ಎಚ್ಚೆತ್ತುಕೊಂಡ ಅಧಿಕರಿಗಳು ಹಂದಿ ಮಾಲೀಕರನ್ನು ಕರೆಯಿಸಿ ಹಂದಿಗಳನ್ನು ಸ್ಥಳಾಂತರಿಸಲು ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.