ADVERTISEMENT

ಹಿರೇಕೆರೂರು | ನಕಲಿ ಪತ್ರಕರ್ತರ ನಿಗ್ರಹಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 14:38 IST
Last Updated 28 ಅಕ್ಟೋಬರ್ 2024, 14:38 IST
ಹಿರೇಕೆರೂರು ತಾಲ್ಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸಿಪಿಐ ಬಸವರಾಜ ಪಿ.ಎಸ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು 
ಹಿರೇಕೆರೂರು ತಾಲ್ಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಸಿಪಿಐ ಬಸವರಾಜ ಪಿ.ಎಸ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು    

ಹಿರೇಕೆರೂರು: ತಾಲ್ಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಬೇಕೆಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಸಿಪಿಐ ಬಸವರಾಜ ಪಿ.ಎಸ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಇಂದೂಧರ ಹಳಕಟ್ಟಿ ಮಾತನಾಡಿ, ‘ನಕಲಿ ಪತ್ರಕರ್ತರು ನೋಂದಣಿಯಿಲ್ಲದ ಚಾನಲ್ ಹೆಸರಿನ ಲೋಗೋಗಳನ್ನು ಹಿಡಿದು ಸರ್ಕಾರಿ ಇಲಾಖೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಅಲ್ಲದೆ, ಅವರನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾರೆ.ಇದರಿಂದ ನೈಜ ಪತ್ರಕರ್ತರ ಸಂವಿಧಾನ ಬದ್ಧ ಕಾರ್ಯವೈಖರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಇದು ಸಾರ್ವಜನಿಕ ವಲಯದಲ್ಲಿ ನೈಜ ಪತ್ರಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಆದ್ದರಿಂದ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕು’ ಎಂದರು.

ನಂತರ ಸಂಘದ ಸದಸ್ಯರು ತಹಶೀಲ್ದಾರ್ ಎಚ್.ಪ್ರಭಾಕರಗೌಡ ಅವರಿಗೂ ತಾಲ್ಲೂಕಿನಲ್ಲಿನ ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಸಲ್ಲಿಸಿದರು.

ADVERTISEMENT

ಪಿಎಸ್‍ಐ ನೀಲಪ್ಪ ನರನಾಲ ಪತ್ರಕರ್ತರಾದ ಪ್ರವೀಣ ಗೌಡ್ರ, ಪ್ರಕಾಶ ಬಣಕಾರ, ರವಿ ಮೇಗಳಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.