ADVERTISEMENT

ಬ್ಯಾಡಗಿ: ಅಂಗವಿಲರಿಗೆ ಅವಕಾಶ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:47 IST
Last Updated 22 ಮೇ 2025, 13:47 IST
ಬ್ಯಾಡಗಿ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸುಗಮ್ಯ ಯಾತ್ರೆ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಚಾಲನೆ ನೀಡಿದರು
ಬ್ಯಾಡಗಿ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸುಗಮ್ಯ ಯಾತ್ರೆ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಚಾಲನೆ ನೀಡಿದರು   

ಬ್ಯಾಡಗಿ: ‘ಅಂಗವಿಕಲರ ಬಗ್ಗೆ ಅನುಕಂಪ ತೋರಿದರಷ್ಟೇ ಸಾಲದು, ಅವರಿಗೆ ಅವಕಾಶ ನೀಡಬೇಕಾದ್ದು ಮುಖ್ಯ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಸುಗಮ್ಯ ಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಅಂಗವಿಕಲರಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು ಸುಗಮ್ಯ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಅವರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದರು.

ADVERTISEMENT

ಅಂಗವಿಕಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾಂಡು ಸುತಾರ ಮಾತನಾಡಿ, ‘ತಾಲ್ಲೂಕಿನಲ್ಲಿ ಸುಳ್ಳು ಪ್ರಮಾಣಪತ್ರದ ಹಾವಳಿ ಮೀತಿ ಮೀರಿದ್ದು, ನೂನತೆ ಇಲ್ಲದವರೂ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.

‘ಅಂಗವಿಕಲರಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕಾರಣಕ್ಕೆ ದುರ್ಬಳಕೆ ಮಾಡುತ್ತಿರುವ ಪ್ರಕರಣಗಳೂ ಹೆಚ್ಚುತ್ತಿವೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್. ಹುಳ್ಯಾಳ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ನಾಗರಾಜ ಅಗಸನಹಳ್ಳಿ, ಶಾಂತಾ ಪಟ್ಟಣಶೆಟ್ಟಿ, ಚಂದ್ರಶೇಖರ ಮಳಿಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.