ADVERTISEMENT

ಹಾಸ್ಟೆಲ್‌ಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 14:06 IST
Last Updated 24 ಸೆಪ್ಟೆಂಬರ್ 2022, 14:06 IST
ಹಾವೇರಿ ನಗರದ ಬಸವೇಶ್ವರ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿ ಬಾಲಕರ ವಸತಿ ನಿಲಯಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ವಸತಿ ನಿಲಯದ ಮೇಲ್ವಿಚಾರಕರಿಗೆ ಮನವಿ ಪತ್ರ ಸಲ್ಲಿಸಿದರು
ಹಾವೇರಿ ನಗರದ ಬಸವೇಶ್ವರ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿ ಬಾಲಕರ ವಸತಿ ನಿಲಯಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ವಸತಿ ನಿಲಯದ ಮೇಲ್ವಿಚಾರಕರಿಗೆ ಮನವಿ ಪತ್ರ ಸಲ್ಲಿಸಿದರು   

ಹಾವೇರಿ: ನಗರದ ಬಸವೇಶ್ವರ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿ ಬಾಲಕರ ವಸತಿ ನಿಲಯಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ತಡರಾತ್ರಿ ಸಭೆ ಮಾಡಿ,ವಸತಿ ನಿಲಯದ ಮೇಲ್ವಿಚಾರಕರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ‘ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಮೂಲಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ವಸತಿ ನಿಲಯದಲ್ಲಿ ಅನೈರ್ಮಲ್ಯ ವಾತಾವರಣ ಮನೆ ಮಾಡಿದೆ. ನೀರು ಶೇಖರಣೆ ಮಾಡುವ ಸಿಂಟೆಕ್ಸ್‌ಗಳನ್ನು ಸ್ವಚ್ಛ ಮಾಡದೆ ಅದೇ ನೀರನ್ನು ಅಡುಗೆ ಬಳಸುತ್ತಿರುವುದು ಸರಿಯಲ್ಲ’ ಎಂದರು.

‘ವಸತಿ ನಿಲಯದ ಮೇಲ್ವಿಚಾರಕರು ಸರಿಯಾದ ಸೌಲಭ್ಯ ನೀಡಿದರೆ ಅಡುಗೆ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಸರಿಯಾದ ರೀತಿಯಲ್ಲಿ ವರ್ತನೆ ಮಾಡದೇ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಗುಣಮಟ್ಟದ ಆಹಾರ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಬಿಸಿಎಂ ಜಿಲ್ಲಾ ಅಧಿಕಾರಿ ಹಾಗೂ ತಾಲ್ಲೂಕಾಧಿಕಾರಿಗಳಿಗೆ ಮೌಖಿಕವಾಗಿ ಹೇಳಿದರೂ ಕೂಡಾ ಸಮಸ್ಯೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಕೆಲವೊಮ್ಮೆ ವಿದ್ಯಾರ್ಥಿಗಳಿಗೆ ಊಟದ ಸಮಸ್ಯೆ ಎದುರಾಗಿದೆ. ಕೆಲ ವಿದ್ಯಾರ್ಥಿಗಳಿಗೆ ಪುಸ್ತಕ ದೊರೆತಿಲ್ಲ. ಸ್ವಂತ ಕಟ್ಟಡವಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೀವ್ರ ಅಡಚಣೆಯುಂಟಾಗಿದೆ. ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಮೂಲವಸ್ತುಗಳಾದ ನೀರಿನ ಬಕೆಟ್, ತಟ್ಟೆ, ಲೋಟ, ಕೊಡದೇ ವಂಚನೆ ಮಾಡಿದು ಸರಿಯಲ್ಲ. ಕೂಡಲೇ ಹಾಸ್ಟೆಲ್‌ನ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ತಾಲ್ಲೂಕು ಮುಖಂಡರಾದ ಅರುಣ ಕಡಕೋಳ, ವಿದ್ಯಾರ್ಥಿಗಳಾದ ಕೃಷ್ಣ ಎಚ್, ಭರತ್ ಎಸ್, ಪ್ರತೀಕ ಎಸ್ ಆರ್, ಸಲೀಂ ಭಾಷಾ, ಯೋಗೀಶ್, ಮಾಲತೇಶ, ಪ್ರವೀಣ್, ಹುಸೇನ್ ಸಾಬ, ಅಭಿಷೇಕ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.