ADVERTISEMENT

ಸಿರಾಜ್‌, ರಾಜಾಭಕ್ಷಿ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 20:15 IST
Last Updated 19 ಫೆಬ್ರುವರಿ 2020, 20:15 IST
ಸಿರಾಜ್‌ ಮತ್ತು ರಾಜಾಭಕ್ಷಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್‌ ಅವರಿಗೆ ಹಾವೇರಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು 
ಸಿರಾಜ್‌ ಮತ್ತು ರಾಜಾಭಕ್ಷಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್‌ ಅವರಿಗೆ ಹಾವೇರಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಯಿತು    

ಹಾವೇರಿ: ಆನೆಗೊಂದಿ ಉತ್ಸವದಲ್ಲಿ ಸಿಎಎ ವಿರೋಧಿ ಕವನ ವಾಚಿಸಿ, ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಾಹಿತಿ ಸಿರಾಜ್‌ ಬಿಸರಳ್ಳಿ ಮತ್ತು ರಾಜಾಭಕ್ಷಿ ಅವರನ್ನುಪೊಲೀಸ್‌ ಕಸ್ಟಡಿಗೆ ನೀಡಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದುಕೊಂಡಂತಾಗಿದೆ ಎಂದು ಹಾವೇರಿಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿತು.

ಬಂಧಿಸಿದ ಕವಿ ಮತ್ತು ಪತ್ರಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಒಕ್ಕೂಟದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಡಿವೈಎಫ್‌ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ಸಿರಾಜ್ ಬಿಸರಳ್ಳಿಯವರ ಕವನ ತೆಲುಗು, ತಮಿಳು ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ. ಕವನ ಸಂಕಲನವೂ ಹೊರಬಿದ್ದಿತು. ಸರ್ಕಾರದ ನೀತಿಯನ್ನು ಟೀಕಿಸುವುದು ದೇಶದ್ರೋಹವಾಗುವುದಿಲ್ಲ ಎಂದು ಮುಂಬೈ ಹೈಕೋರ್ಟ್ ತೀರ್ಪು ನೀಡಿದೆ ಎಂದು ತಿಳಿಸಿದರು.

ADVERTISEMENT

ಲಿಂಗತ್ವ ಅಲ್ಪಸಂಖ್ಯಾತರ ಸಂಘಟನೆ ರಾಜ್ಯ ಕಾರ್ಯದರ್ಶಿ ಅಕ್ಷತಾ ಕೆ.ಸಿ ಮಾತನಾಡಿ, ಕವಿಯೊಬ್ಬ ತನ್ನ ಅಭಿವ್ಯಕ್ತಿಯನ್ನು ಕನ್ನಡ ಕವನದ ಮೂಲಕ ವ್ಯಕ್ತಪಡಿಸಿದರೆ ಅದು ದೇಶದ್ರೋಹವೆಂದು ಪರಿಗಣಿಸಲಾಗಿದೆ. ಇದು ಕನ್ನಡ ಮತ್ತು ಕಾವ್ಯಕ್ಕೆ ಮಾಡುತ್ತಿರುವ ದ್ರೋಹ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.

ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷರಾದ ಹೊನ್ನಪ್ಪ ಮರೆಮ್ಮನವರ, ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ಡಿಎಸ್‌ಎಸ್ ಮುಖಂಡ ಹೊನ್ನೇಶ್ವರ ತಗಡಿನಮನಿ, ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ, ಎಸ್‌ಎಫ್‌ಐ ಸಹಕಾರ್ಯದರ್ಶಿ ಬಸವರಾಜ ಭೋವಿ, ವಿದ್ಯಾರ್ಥಿ ಮುಖಂಡರಾದ ಸಿದ್ದಲಿಗೇಶ ಮರೆಮ್ಮನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.